ಬೆಂಗಳೂರು:ರಾಜ್ಯದಲ್ಲಿ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು ಮುಳುವಾಯ್ತಾ ಎನ್ನುವಂತಾಗಿದೆ. ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ 36 ಹೊಸ ಪ್ರಕರಣಗಳು ಬೆಳಕಿಗೆ ಬಂದು ಜನತೆಯನ್ನು ಇನ್ನಷ್ಟು ಆತಂಕಕ್ಕೀಡು ಮಾಡಿದೆ. ಈ ಪೈಕಿ 17 ಮಂದಿ ಬಾಲಕಿಯರು ಹಾಗೂ ಮಹಿಳೆಯರಾಗಿದ್ದರೆ, 19 ಮಂದಿ ಬಾಲಕರು ಹಾಗೂ ಪುರುಷರು.
ಅದರಲ್ಲಿಯೂ ಮೂರು ನಗರಗಳ ಸ್ಥಿತಿ ಅಯೋಮಯವಾಗಿದ್ದು, ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನದವರೆಗೆ ಅಂದರೆ ಕೆಲವೇ ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಬರೋಬ್ಬರಿ 12 ಪ್ರಕರಣಗಳು ವರದಿಯಾಗಿದ್ದರೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 7 ಪ್ರಕರಣ ದಾಖಲಾಗಿವೆ. ದಾವಣಗೆರೆಯಲ್ಲೂ ಕರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು ಮತ್ತೆ 6 ಕೇಸ್​ಗಳು ಪತ್ತೆಯಾಗಿವೆ.
ಇದನ್ನೂ ಓದಿ:ವಿಚಿತ್ರ ಕಾಯಿಲೆಯಿಂದ ಪ್ರತಿನಿತ್ಯ ನೋವುಂಡು ಬದುಕುತ್ತಿರೋ ವ್ಯಕ್ತಿಯ ಕಣ್ಣೀರ ಕತೆಯಿದು!
ಉಳಿದಂತೆ ದಕ್ಷಿಣ ಕನ್ನಡದ ಬಂಟ್ವಾಳ, ಚಿತ್ರದುರ್ಗ ಹಾಗೂ ಬೀದರ್​ನಲ್ಲಿ ತಲಾ ಮೂರು ಹಾಗೂ ತುಮಕೂರು ಮತ್ತು ವಿಜಯಪುರದಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿವೆ.
ಈ ಮೂಲಕ ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 789ಕ್ಕೆ ಏರಿದೆ. ಈ ಪೈಕಿ 379 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ ಇಲ್ಲಿಯವರೆಗೆ ಮೃತಪಟ್ಟವರು 30 ಮಂದಿ.
ಇದನ್ನೂ ಓದಿ:VIDEO| ಭಾರತದಲ್ಲಿ ಎರಡು ತಲೆ ಹಾವು ಪತ್ತೆ: ಇದರ ವಿಶೇಷತೆ ಕೇಳಿದ್ರೆ ಶಾಕ್ ಆಗ್ತೀರಾ!
ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಇದನ್ನೂ ಓದಿ:ಕಿಲ್ಲರ್​ ಕರೊನಾಗೆ ರಾಮಬಾಣವಾಯ್ತಾ ಪಾಚಿ ಕಡಲೆ ಮಿಠಾಯಿ…?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − ten =
Remember me
