ಜೈಪುರ:ಒಂದು ಕಾಲದಲ್ಲಿ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುತ್ತಿದ್ದ ಕಾಂಗ್ರೆಸ್​ ಪಕ್ಷ ಇಂದು ಸ್ವತಂತ್ರವಾಗಿ 300 ಕ್ಷೇತ್ರಗಳಲ್ಲಿ ಸ್ವರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್​ ಮಾಡಿದ ಪಾಪಕ್ಕೆ ದೇಶದ ಜನರೇ ಶಿಕ್ಷೆ ನೀಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು.
ಇದನ್ನೂ ಓದಿ:ಇಂಡಿಯಾ ಮೈತ್ರಿ ಒಕ್ಕೂಟದ ಚುನಾವಣಾ ರ‍್ಯಾಲಿ: ರಾಹುಲ್ ಗಾಂಧಿ ಗೈರು? ಕಾರಣ ಹೀಗಿದೆ..!
ರಾಜಸ್ಥಾನದ ಜಲೋರ್​ ಜಿಲ್ಲೆಯಲ್ಲಿ ಭಾನುವಾರ ಆಯೋಜಿಸಿದ್ದ ರ್ಯಾಲಿ ಉದ್ದೇಶಿಸಿ ಮಾತನಾಡಿದರು. ರಾಜಸ್ಥಾನದ ಅರ್ಧಭಾಗದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಜನರು ಕಾಂಗ್ರೆಸ್​ಗೆ ಶಿಕ್ಷೆ ನೀಡಿದ್ದಾರೆ ಎಂದು ತಿಳಿಸಿದರು.
ರಾಜಸ್ಥಾನದಾದ್ಯಂತ ದೇಶಪ್ರೇಮವಿದೆ. ಕಾಂಗ್ರೆಸ್‌ ಪಕ್ಷ ಎಂದಿಗೂ ಭಾರತವನ್ನು ಬಲಿಷ್ಠಗೊಳಿಸಲು ಸಾಧ್ಯವಿಲ್ಲ ಎಂಬುವುದು ಜನರಿಗೆ ಮನವರಿಕೆಯಾಗಿದೆ. 2014ಕ್ಕಿಂತ ಮೊದಲಿದ್ದ ಪರಿಸ್ಥಿತಿ ಮತ್ತೆ ಬರಲು ದೇಶದ ಜನರು ಬಿಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷವು ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಗೆದ್ದಲುಗಳನ್ನು ಹರಡುವ ಮೂಲಕ ದೇಶವನ್ನು ಟೊಳ್ಳು ಮಾಡಿದೆ. ಇದರಿಂದ ದೇಶದ ಜನರು ಕಾಂಗ್ರೆಸ್​ ಮೇಲೆ ಕೋಪಗೊಂಡಿದ್ದಾರೆ. ಅವರ ಪಾಪಗಳಿಗೆ ಜನರು ಶಿಕ್ಷೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ಅಭ್ಯರ್ಥಿ ಲುಂಬರಾಮ್ ಚೌಧರಿ ಪರ ಜಲೋರ್ ಜಿಲ್ಲೆಯ ಭಿನ್ಮಾಲ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಿದರು.ರಾಜಸ್ಥಾನದಲ್ಲಿ 25 ಲೋಕಸಭಾ ಸ್ಥಾನಗಳಿವೆ. 12 ಸ್ಥಾನಗಳಿಗೆ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆದಿದ್ದು, ಉಳಿದ 13 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.
ನೇಹಾ ಹಿರೇಮಠ ತಂದೆಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಡಿಕೆ ಶಿವಕುಮಾರ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 8 =
Remember me
