ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಲಿಷ್ಠ ನಾಯಕತ್ವದಲ್ಲಿ ಭಾರತವು ಸ್ಥಳೀಯ ಸೊಗಡಿನೊಂದಿಗೆ ತಂತ್ರಜ್ಞಾನ ನಾವೀನ್ಯತೆಯಲ್ಲಿ ದಾಪುಗಾಲು ಹಾಕುತ್ತಿದೆ ಎಂದು ಕೇಂದ್ರ ರೈಲ್ವೆ, ಸಂವಹನ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು. ಬೆಂಗಳೂರಿನಲ್ಲಿ ಇಂದು ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡವನ್ನು ವರ್ಚುವಲ್ ಮೂಲಕ ಉದ್ಘಾಟಿಸಿದ ನಂತರ ಸಭಿಕರನ್ನುದ್ದೇಶಿಸಿ ಅವರು ಮಾತನಾಡಿದರು.
ಅಗತ್ಯವಾದ ಅನುಕೂಲಕರ ಪರಿಸರ ವ್ಯವಸ್ಥೆ ಸೃಷ್ಟಿಸುತ್ತಿರುವ ಕೇಂದ್ರ ಸರ್ಕಾರವು, ನಮ್ಮ ವಿಜ್ಞಾನಿಗಳು ಮತ್ತು ತಂತ್ರಜ್ಞರನ್ನು ಹೊಸ ಆವಿಷ್ಕಾರಗಳಿಗೆ ಪ್ರೇರೇಪಿಸಲು ಬದ್ಧವಾಗಿದೆ ಎಂದು ಹೇಳಿದರು. ಇದೇ ಮೊದಲ ಬಾರಿಗೆ ಭಾರತದಲ್ಲಿ ಟೆಲಿಕಾಂ ಉಪಕರಣಗಳನ್ನು ತಯಾರಿಸಲಾಗುತ್ತಿದೆ. ದೇಶವು ದೇಶೀಯವಾಗಿ 4ಜಿ ಮತ್ತು 5ಜಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿದೆ. ʻವಂದೇ ಭಾರತ್ʼನಂತಹ ವಿಶ್ವದರ್ಜೆಯ ರೈಲುಗಳನ್ನು ವಿನ್ಯಾಸಗೊಳಿಸಬಹುದು ಮತ್ತು ತಯಾರಿಸಬಹುದು ಎಂದು ಭಾರತ ಸಾಬೀತುಪಡಿಸಿದೆ ಎಂದು ಸಚಿವರು ಹೇಳಿದರು.
3ಡಿ ಮುದ್ರಣವು ಈಗ ನವೋದ್ಯಮಗಳು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅಳವಡಿಸಿಕೊಳ್ಳಲಾಗುತ್ತಿರುವ ʻಪ್ರಾತ್ಯಕ್ಷಿಕೆʼ ತಂತ್ರಜ್ಞಾನವಾಗಿದೆ. ಇದು ವೆಚ್ಚ ಉಳಿತಾಯದ, ಪರಿಸರ ಸ್ನೇಹಿ ಮತ್ತು “ಆತ್ಮನಿರ್ಭರ ಭಾರತ್” ಪರಿಕಲ್ಪನೆಯನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್​ನಲ್ಲಿರುವ ಹೊಸ ಅಂಚೆ ಕಚೇರಿ ಕಟ್ಟಡವನ್ನು ಐಐಟಿ ಮದ್ರಾಸ್ ಮತ್ತು ʻಎಲ್ ಆ್ಯಂಡ್​ ಟಿʼಯ ತಾಂತ್ರಿಕ ಜ್ಞಾನವನ್ನು ಬಳಸಿಕೊಂಡು ನಿರ್ಮಿಸಲಾಗಿದೆ. ಕಟ್ಟಡ ಉದ್ಘಾಟನೆಯ ಸಂದರ್ಭದಲ್ಲಿ ಈ ಮಾದರಿ ಯೋಜನೆಯ ಕಿರು ವೀಡಿಯೊ ಸಹ ಪ್ರಸಾರ ಮಾಡಲಾಯಿತು. ಬಳಿಕ ಸಚಿವರು 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡದ ಮೇಲೆ ವಿಶೇಷ ಕವರ್ ಬಿಡುಗಡೆ ಮಾಡಿದರು, ಜೊತೆಗೆ ಅದರ ಪ್ರತಿಕೃತಿ ಅನಾವರಣಗೊಳಿಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಉಪ-ನಗರ ರೈಲು ಸೇವೆಯನ್ನು ಪ್ರಾರಂಭಿಸುವ ಕೇಂದ್ರ ಸರ್ಕಾರದ ಬದ್ಧತೆ ಹಾಗೆಯೇ ಉಳಿದಿದೆ ಎಂದರು. ಶರವೇಗದ ರೈಲುಗಳ ಓಡಾಟಕ್ಕಾಗಿ 4000 ಕಿ.ಮೀ ರೈಲ್ವೆ ಹಳಿಗಳನ್ನು ನವೀಕರಿಸಲಾಗಿದೆ ಎಂದರು. ಮುಂದಿನ ನಾಲ್ಕರಿಂದ ಐದು ವರ್ಷಗಳಲ್ಲಿ ಹೆಚ್ಚಿನ ʻವಂದೇ ಭಾರತ್ʼ ರೈಲುಗಳನ್ನು ಓಡಿಸಲು ಅನುವು ಮಾಡಿಕೊಡಲು ಹಳಿಗಳ ಸಾಮರ್ಥ್ಯ ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಮಾಹಿತಿ ನೀಡಿದರು.
ʻಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ-2023ʼ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಇದು ಸಮಾಜದ ಎಲ್ಲಾ ವಿಭಾಗಗಳನ್ನು ಒಳಗೊಂಡ “ಸಮತಲ ಕಾಯ್ದೆ”ಯಾಗಿದೆ ಎಂದು ಅಭಿಪ್ರಾಯಪಟ್ಟರು. ತಜ್ಞರು ಮತ್ತು ವಿವಿಧ ಮಧ್ಯಸ್ಥಗಾರರೊಂದಿಗೆ ವ್ಯಾಪಕವಾದ ಸಮಾಲೋಚನೆಗಳ ನಂತರ ಇದನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು. ಸಂಸದರಾದ ಪಿ.ಸಿ.ಮೋಹನ್ ಮತ್ತು ಸದಾನಂದ ಗೌಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಐಐಟಿ ಮದ್ರಾಸ್​​ನ ಸಿವಿಲ್ ಇಂಜಿನಿಯರಿಂಗ್ ಪ್ರಾಧ್ಯಾಪಕ ಮತ್ತು ಡೀನ್ ಪ್ರೊ. ಮನು ಸಂತಾನಮ್ ಅವರು 3ಡಿ ಮುದ್ರಿತ ಅಂಚೆ ಕಚೇರಿ ನಿರ್ಮಾಣದ ತಾಂತ್ರಿಕ ವಿವರಗಳನ್ನು ಹಂಚಿಕೊಂಡರು. ಇದಕ್ಕೂ ಮುನ್ನ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್ ತಮ್ಮ ಪರಿಚಯಾತ್ಮಕ ಭಾಷಣದಲ್ಲಿ ತಂತ್ರಜ್ಞಾನ ಆಧಾರಿತ 3ಡಿ ಮುದ್ರಿತ ಅಂಚೆ ಕಚೇರಿಯ ಉದ್ದೇಶಗಳನ್ನು ವಿವರಿಸಿದರು.
The spirit of Aatmanirbhar Bharat!🇮🇳India’s first 3D printed Post Office.
📍Cambridge Layout, Bengalurupic.twitter.com/57FQFQZZ1b
— Ashwini Vaishnaw (@AshwiniVaishnaw)August 18, 2023

ಸದ್ಯ ಈ ಬಿಯರ್ ಕುಡಿಯಬೇಡಿ!; ಸೆಡಿಮೆಂಟ್ ಶೇಖರಣೆ ಆಗಿರುವುದರಿಂದ ತಡೆ ಹಿಡಿದ ಅಬಕಾರಿ ಇಲಾಖೆ

ಇಲ್ಲಿನ ಶಿಕ್ಷಕರು ಉದ್ಯೋಗಕ್ಕೆ ಸೇರುವ ಮುನ್ನ ಈ ಕೆಲಸ ಮಾಡಲೇಬೇಕು: ಏನಿದು ಲ್ಯಾಬ್​ ಸ್ಕೂಲ್?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
