ಬಿಕಾನೇರ್​:ರಾಜಸ್ಥಾನದಲ್ಲಿ ಸರ್ಕಾರಿ ನೌಕರರು ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದುವಂತಿಲ್ಲ ಎನ್ನುವ ಕಾನೂನು ಇದೆ. ಕಾರಣಕ್ಕೆ ಸರ್ಕಾರಿ ನೌಕರಿ ಕಳೆದುಕೊಳ್ಳುವ ಭಯಕ್ಕೆ ಈಡಾಗಿ ಈ ದಂಪತಿ, ತಮ್ಮ 5 ತಿಂಗಳ ಮಗುವನ್ನು ನಾಲೆಗೆ ಎಸೆದು ಅದರ ಸಾವಿಗೆ ಕಾರಣರಾಗಿದ್ದಾರೆ.
ಸರ್ಕಾರಿ ಉದ್ಯೋಗವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ರಾಜಸ್ಥಾನದ ಬಿಕಾನೇರ್‌ನಲ್ಲಿ ಸೋಮವಾರ ತಮ್ಮ ಐದು ತಿಂಗಳ ಹೆಣ್ಣು ಮಗುವನ್ನು ಕಾಲುವೆಗೆ ಎಸೆದ ಆರೋಪದ ಮೇಲೆ ಪುರುಷ ಮತ್ತು ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾಲೆಯಲ್ಲಿ ಬಿದ್ದ 5 ತಿಂಗಳ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ಆರೋಪಿ ತಂದೆಯನ್ನು ಜನ್ವರ್‌ಲಾಲ್ ಎಂದು ಗುರುತಿಸಲಾಗಿದೆ. ಅವರು ಚಂದಾಸರ್ ಗ್ರಾಮದಲ್ಲಿ ಗುತ್ತಿಗೆ ಶಾಲಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಜನ್ವರ್‌ಲಾಲ್ ಇಬ್ಬರು ಮಕ್ಕಳನ್ನು ಹೊಂದಿರುವುದಾಗಿ ಪ್ರಮಾಣ ಪತ್ರ ನೀಡಿದ್ದರು. ಪೊಲೀಸರ ಪ್ರಕಾರ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವುದರಿಂದ ಕೆಲಸ ಕಳೆದುಕೊಳ್ಳಬಹುದು ಎಂದು ಅವರು ಆತಂಕದಿಂದ ಹೀಗೆ ಮಾಡಿದ್ದಾರೆ.
“ಬಿಕಾನೇರ್‌ನ ಛತ್ತರ್‌ಗಢದಲ್ಲಿ ಪುರುಷ ಮತ್ತು ಮಹಿಳೆಯ ಜೋಡಿಯೊಂದು ಹೆಣ್ಣು ಮಗುವನ್ನು ಕಾಲುವೆಗೆ ಎಸೆದಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ನಂತರ ಮೃತ ಮಗುವಿನ ಶರೀರವನ್ನು ಪೊಲೀಸರು ವಶಪಡಿಸಿಕೊಂಡರು. ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದ್ದು ಪುರುಷ ಮತ್ತು ಮಹಿಳೆ ಮೃತ ಹೆಣ್ಣು ಮಗುವಿನ ಪೋಷಕರು ಎಂದು ಕಂಡುಬಂದಿದೆ ಎಂದು ಸರ್ಕಲ್ ಆಫೀಸರ್ ವಿನೋದ್ ಕುಮಾರ್’ ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
