ಸಂಗಾರೆಡ್ಡಿ:ಮಾಟ ಮಂತ್ರವನ್ನು ನಡೆಸುತ್ತಿದ್ದಾರೆ ಎಂದು ದಂಪತಿಗಳಿಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿಯಲ್ಲಿ ನಡೆದಿದೆ.ಇದನ್ನೂ ಓದಿ:ದೇಹ ಮಣ್ಣಾಗುವಷ್ಟರಲ್ಲಿ ಶವ ಪೆಟ್ಟಿಗೆ ಒಳಗಿಂದ ಕೇಳಿ ಬಂತು ಶಬ್ದ; ಅಲ್ಲಿದ್ದವರಿಗೆ ಅಚ್ಚರಿ!ಸದಾಶಿವಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೋಲ್ಕೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯಾದಯ್ಯ ಹಾಗೂ ಆತನ ಹೆಂಡತಿ ಶ್ಯಾಮಮ್ಮ ಮಾಟ ಮಂತ್ರವನ್ನು ನಡೆಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಗ್ರಾಮಸ್ಥರೆಲ್ಲರೂ ಸೇರಿಕೊಂಡು ಇವರಿಬ್ಬರ ಮನೆಗೆ ನುಗ್ಗಿ ಅವರನ್ನು ಬೇರೆಡೆ ಎಳೆದೊಯ್ದು, ಕೊನೆಗೆ ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಈ ಕುರಿತಾದ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಕೂಡಲೇ ಗ್ರಾಮಕ್ಕೆ ತೆರಳಿ ದಂಪತಿಗಳ ರಕ್ಷಣೆ ಮಾಡಿದ್ದಾರೆ.ಈ ಕುರಿತು ಮಾತನಾಡಿರುವ ಪೊಲೀಸ್​ ಅಧಿಕಾರಿ, ಎರಡು ದಿನಗಳ ಹಿಂದೆ ಮಾಟಮಂತ್ರ ಮಾಡಿದ ಆರೋಪದ ಮೇಲೆ ಕೆಲವು ಗ್ರಾಮಸ್ಥರು ದಂಪತಿಯನ್ನು ಮರಕ್ಕೆ ಕಟ್ಟಿಹಾಕಿದ್ದಾರೆ. ಆದರೆ ಸಂತ್ರಸ್ತರಿಗೆ ಗಂಭೀರ ಗಾಯಗಳಾಗಿಲ್ಲ ಮತ್ತು ಘಟನೆಯ ನಂತರ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − five =
Remember me
