ನವದೆಹಲಿ:ಅನೇಕ ಕುಟುಂಬಗಳು ತಮ್ಮ ಹೆಣ್ಣುಮಕ್ಕಳ ಮದುವೆಗೆ ತರಾತುರಿ ನಡೆಸುತ್ತಿವೆ. ಹೀಗಾಗಿ ಹೆಣ್ಣುಮಕ್ಕಳ ವಿವಾಹದ ವಯಸ್ಸನ್ನು ಕಾನೂನಾತ್ಮಕವಾಗಿ ಕನಿಷ್ಠ 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಆದರೆ ಈ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗುತ್ತಿರುವ ಸುದ್ದಿ ಕೊಂಚ ವಿಭಿನ್ನವಾಗಿದೆ. 103 ವರ್ಷದ ವ್ಯಕ್ತಿ 49 ವರ್ಷದ ಮಹಿಳೆಯನ್ನು ಮದುವೆಯಾಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಭೋಪಾಲ್‌ನ ಇಟ್ವಾರದ ಸ್ವಾತಂತ್ರ್ಯ ಹೋರಾಟಗಾರ ಹಬೀಬ್ ನಜರ್, ಕಳೆದ ವರ್ಷ 49 ವರ್ಷದ ಫಿರೋಜ್ ಜಹಾನ್ ಅವರೊಂದಿಗೆ ವಿವಾಹವಾಗಿದ್ದಾರೆ. ಸಾಕಷ್ಟು ಮಂದಿ ದಂಪತಿಗೆ ಅಭಿನಂದನೆ ಸಲ್ಲಿಸಿದ್ದಾರೆ.ವಧುವಿನೊಂದಿಗೆ ಆಟೋ ರಿಕ್ಷಾದಲ್ಲಿ ಬರುತ್ತಿರುವ ವಿಡಿಯೋ ವೈರಲ್ ಆಗಿತ್ತು. ನಾಜರ್ ಮುಖದಲ್ಲಿ ನಗು, ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸುತ್ತಿರುವುದು ಕಂಡು ಬರುತ್ತಿದೆ.
ನಾಜರ್ ಅವರು ಮೂರನೇ ಮದುವೆಯಾಗಿದ್ದಾರೆ, ಅವರ ಎರಡನೇ ಹೆಂಡತಿಯ ಮರಣದ ನಂತರ, ನಾಜರ್ ಅವರು ತುಂಬಾ ಒಂಟಿತನವನ್ನು ಅನುಭವಿಸಿದರು. ಇದೇ ಕಾರಣಕ್ಕೆ ಮತ್ತೊಂದು ಮದುವೆಯಾಗಿದ್ದಾರೆ. ಅವರ ಪತ್ನಿಯಾಗಿ ಬಂದಿರುವ ಫಿರೋಜ್ ಜಹಾನ್​ ಕೂಡ ತನ್ನ ಪತಿಯನ್ನು ಕಳೆದುಕೊಂಡಿದ್ದರು. ವಯಸ್ಸಾದ ಸ್ವಾತಂತ್ರ್ಯ ಹೋರಾಟಗಾರರನ್ನು ನೋಡಿಕೊಳ್ಳಲು ಯಾರಾದರೂ ಬೇಕೇ ಬೇಕು ಎಂಬುದನ್ನು ಅರಿತು ಅವರನ್ನು ಮದುವೆಯಾಗಿದ್ದಾರೆ. ಇದು ಪ್ರೀತಿ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.
ಬಿಗ್​ಬಾಸ್​​ ವಿನ್ನರ್​ಗೆ 50 ಲಕ್ಷ ರೂ. ಜತೆಗೆ ಸಿಗ್ತು ಐಷಾರಾಮಿ ಕಾರು; 6 ಫೈನಲಿಸ್ಟ್​ಗಳಿಗೂ ಸಿಗ್ತು ಲಕ್ಷ..ಲಕ್ಷ ಹಣ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − one =
Remember me
