ನವದೆಹಲಿ:ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಇದನ್ನೂ ಓದಿ:ಅಮಿತ್ ಷಾ ಭಾಷಣ ತಿರುಚಿದ ಪ್ರಕರಣ: ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್​
ಹಿಂದೂ ಹಾಗೂ ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಬಿಜೆಪಿಗೆ ಮತ ಕೇಳಿದ ಆರೋಪದ ಮೇಲೆ ಪ್ರಧಾನಿ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ವಕೀಲ ಆನಂದ್ ಎಸ್ ಜೊಂಧಲೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ವಕೀಲ ಆನಂದ್ ಎಸ್ ಜೊಂಧಳೆ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಚಿನ್ ದತ್ತಾ ನೇತೃತ್ವದ ಪೀಠ ಅರ್ಜಿದಾರರು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಊಹಿಸಿರುವುದರಿಂದ ಅರ್ಜಿಯನ್ನು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ ಎಂದು ಗಮನಿಸಿ ಯಾವುದೇ ದೂರಿನ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಳ್ಳುವಂತೆ ಆಯೋಗಕ್ಕೆ ಸೂಚಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಆಯೋಗವು ಜೊಂಧಲೆ ಅವರ ದೂರನ್ನು ಕಾನೂನಿನ ಪ್ರಕಾರ ಪರಿಶೀಲಿಸುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗದ ಪರವಾಗಿ ವಕೀಲ ಸಿದ್ಧಾಂತ್ ಕುಮಾರ್ ಹೇಳಿದರು. ಆಯೋಗವು ನಿತ್ಯವು ಇಂತಹ ದೂರುಗಳನ್ನು ಸ್ವೀಕರಿಸುತ್ತದೆ, ಪರಿಶೀಲಿಸುತ್ತದೆ ಮತ್ತು ಕ್ರಮ ತೆಗೆದುಕೊಳ್ಳುತ್ತದೆ. ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆ ಎಂದು ವಾದಿಸಿದರು.
ಚುನಾವಣಾ ಆಯೋಗದ ಪರ ವಾದ ಮಂಡಿಸಿದ ವಕೀಲ ಸಿದ್ದಾಂತ್ ಕುಮಾರ್ ದೂರನ್ನು ಕ್ರಮಬದ್ಧವಾಗಿ ವಿಚಾರಣೆ ನಡೆಸಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಜಾರ್ಖಂಡ್: ಗಂಡೇ ವಿಧಾನಸಭಾ ಕ್ಷೇತ್ರದಿಂದ ಹೇಮಂತ್ ಸೋರೆನ್ ಪತ್ನಿ ಕಲ್ಪನಾ ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 4 =
Remember me
