ನವದೆಹಲಿ:ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೋಸ್​​ ಅವೆನ್ಯೂ ನ್ಯಾಯಾಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 8ರವರೆಗೆ ವಿಸ್ತರಿಸಿದೆ. ಕೇಜ್ರಿವಾಲ್ ಅವರ ಹಿಂದಿನ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಗುರುವಾರ(ಜುಲೈ 25) ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಇದನ್ನು ಓದಿ:ಖನಿಜ ಹಕ್ಕುಗಳ ಮೇಲೆ ತೆರಿಗೆ ವಿಧಿಸಲು ರಾಜ್ಯಗಳಿಗೆ ಹಕ್ಕಿದೆ; ಸುಪ್ರೀಂಕೋರ್ಟ್​​
ಮದ್ಯದ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಪ್ರಕರಣದಲ್ಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ತಿಹಾರ್​ ಜೈಲಿನಲ್ಲಿದ್ದಾರೆ. ಎರಡು ಹೆಚ್ಚುವರಿ ಕಾನೂನು ಸಭೆಗಳನ್ನುಕೋರಿ ನ್ಯಾಯಾಲಯಕ್ಕೆ ಸಿಎಂ ಕೇಜ್ರಿವಾಲ್​ ಮನವಿ ಮಾಡಿದರು. ಅವರ ಮನವಿಯನ್ನು ಜೈಲು ಅಧಿಕಾರಿಗಳು ಮತ್ತು ಜಾರಿ ನಿರ್ದೇಶನಾಲಯ (ಇಡಿ) ವಕೀಲರು ವಿರೋಧಿಸಿದರು. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಕಕ್ಷಿದಾರರ ವಕೀಲರ ಸಲ್ಲಿಕೆಗಳನ್ನು ಆಲಿಸಿದ ನಂತರ ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಪರ ಹಿರಿಯ ವಕೀಲ ರಮೇಶ್ ಗುಪ್ತಾ ವಾದ ಮಂಡಿಸಿದ್ದರು.
ಇನ್ನು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಷ್ ಸಿಸೋಡಿಯಾ ಮತ್ತು ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಜುಲೈ 31ರವರೆಗೆ ವಿಸ್ತರಿಸಿದೆ. ಸಿಸೋಡಿಯಾ ಮತ್ತು ಕವಿತಾ ಅವರನ್ನೂ ವೀಡಿಯೋ ಕಾನ್ಫರೆನ್ಸಿಂಗ್ ವಿಚಾರಣೆಗೆ ಹಾಜರುಪಡಿಸಲಾಗಿತ್ತು.
ಸಿಬಿಐ ಮತ್ತು ಇಡಿ ಪ್ರಕರಣದಲ್ಲಿ ಕೇಜ್ರಿವಾಲ್ ಪ್ರಸ್ತುತ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಜೂನ್ 26 ರಂದು ಅವರನ್ನು ಬಂಧಿಸಿತ್ತು. (ಏಜೆನ್ಸೀಸ್​​)
ಪೂಜಾ ಖೇಡ್ಕರ್ ಪ್ರಕರಣದ ನಂತರ ಎಚ್ಚೆತ್ತ UPSC; ಅಕ್ರಮ ತಡೆಯಲು ಹೊಸ ಕ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 6 =
Remember me
