ನವದೆಹಲಿ:ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿರುವ ದೆಹಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
2018ರಲ್ಲಿ ಹಿಂದೂ ದೇವತೆಯ ವಿರುದ್ಧದ ‘ಆಕ್ಷೇಪಾರ್ಹ ಟ್ವೀಟ್’ಗೆ ಸಂಬಂಧಿಸಿದ ಪ್ರಕರಣದಲ್ಲಿ ಜುಬೇರ್​ನನ್ನು ಬಂಧಿಸಲಾಗಿತ್ತು. ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ಪೊಲೀಸ್ ಮನವಿಯನ್ನು ಅನುಮತಿಸಿ, ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
5 ದಿನಗಳ ಕಾಲ ಬಂಧನದ ಅವಧಿ ಮುಗಿದ ಹಿನ್ನಲೆಯಲ್ಲಿ ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಸದ್ಯ ಟ್ವೀಟ್​ ಮಾಡಿದ್ದು ನಾನೇ ಎಂದು ಒಪ್ಪಿಕೊಂಡಿರುವ ಜುಬೈರ್​ ವಿರುದ್ಧ ಐಪಿಸಿಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಮತ್ತು 295 (ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.(ಏಜೆನ್ಸೀಸ್​)
ಉದಯಪುರ ಹತ್ಯೆ ಪ್ರಕರಣ: 10 ದಿನಗಳ ಕಾಲ ಆರೋಪಿಗಳು ಎನ್​ಐಎ ವಶಕ್ಕೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
