ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರು ನಿನ್ನೆ ದೆಹಲಿಯ ಆರ್ಮಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ 20 ದಿನಗಳ ಹಿಂದೆ ಮಿದುಳು ಸರ್ಜರಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ನಂತರ ಕೊವಿಡ್​-19 ಸೋಂಕು ಇರುವುದು ದೃಢಪಟ್ಟಿತ್ತು.
ಮಿದುಳು ಸರ್ಜರಿ ಆಗುತ್ತಿದ್ದಂತೆ ಅವರ ಆರೋಗ್ಯವೂ ಹದಗೆಟ್ಟು ಸಂಪೂರ್ಣ ಕೋಮಾಕ್ಕೆ ಜಾರಿದ್ದರು. ನಿನ್ನೆ ಅವರು ಮೃತಪಟ್ಟ ನಂತರ ಕೊವಿಡ್​-19ನಿಂದ ಸಾವನ್ನಪ್ಪಿದ್ದಾರೆ ಎಂದು ಅನೇಕರು ಹೇಳಿದ್ದರು.ಆದರೆ ಪ್ರಣಬ್​ ಮುಖರ್ಜಿ ಜೀವ ಹೋಗಿದ್ದು ಕರೊನಾ ಸೋಂಕಿನಿಂದ ಅಲ್ಲ, ಬದಲಿಗೆ ಮಿದುಳು ಸರ್ಜರಿಯಾಗಿದ್ದೇ ಕಾರಣ ಎಂದು ಅವರ ಪುತ್ರ ಅಭಿಜಿತ್ ಮುಖರ್ಜಿ ತಿಳಿಸಿದ್ದಾರೆ.ಇದನ್ನೂ ಓದಿ:video/ ಬೆಂಕಿಯಲ್ಲಿ ಚಿತ್ರ ಬಿಡಿಸಿ ದಾಖಲೆ ಬರೆದ ಕರ್ನಾಟಕದ ಕುವರ
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅಭಿಜಿತ್​ ಅವರು, ನನ್ನ ತಂದೆ ಕುಟುಂಬದ ಅತಿ ದೊಡ್ಡ ಶಕ್ತಿಯಾಗಿದ್ದರು. ನಾವೆಲ್ಲರೂ ಅವರನ್ನು ತುಂಬ ಮಿಸ್​ ಮಾಡಿಕೊಳ್ಳುತ್ತೇವೆ. ಅವರ ಸಾವಿಗೆ ಕರೊನಾ ಮುಖ್ಯ ಕಾರಣವಲ್ಲ ಎಂದು ಹೇಳಿದ್ದಾರೆ.ಕಳೆದ ನಾಲ್ಕು ತಿಂಗಳಿಂದ ಅವರು ಹೊರಗಿನವರನ್ನು ಯಾರನ್ನೂ ಭೇಟಿಯಾಗಿಲ್ಲ. ನಾವೂ ಕೂಡ ಕೊವಿಡ್​-19 ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದೆವು. ಆದರೆ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ಪತ್ತೆಯಾಗಿತ್ತು. ಆದರೆ ಅದು ಜೀವ ತೆಗೆಯುವಷ್ಟೆಲ್ಲ ಅವರನ್ನು ಬಾಧಿಸಲಿಲ್ಲ ಎಂದಿದ್ದಾರೆ. (ಏಜೆನ್ಸೀಸ್​)
ಐಪಿಎಲ್ ವೇಳೆ ಕರೊನಾ ಟೆಸ್ಟ್‌ಗೆ ಬಿಸಿಸಿಐ ಎಷ್ಟು ಕೋಟಿ ರೂ. ಖರ್ಚು ಮಾಡಲಿದೆ ಗೊತ್ತೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
