ಲಖನೌ:ಕರೊನಾ ಕೈಮೀರುತ್ತಿರುವ ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫಿಕರ್​ ರೆಹಮಾನ್​ ಅವರು ನೀಡಿರುವ ಹೇಳಿಕೆಯೊಂದು ವೈರಲ್ ಆಗುತ್ತಿದೆ.
ಮುಸ್ಲಿಮರಿಗೆ ಮಸೀದಿಗಳಿಗೆ ತೆರಳಿ ನಮಾಜ್​ ಮಾಡಲು ಅವಕಾಶ ಮಾಡಿಕೊಟ್ಟರೆ ಮಾತ್ರ ಕರೊನಾ ನಿಯಂತ್ರಣವಾಗುತ್ತದೆ ಎಂದು ಶಫಿಕರ್​ ಹೇಳಿದ್ದಾರೆ. ಅಷ್ಟೇ ಅಲ್ಲ ಆಗಸ್ಟ್​ 12ರಂದು ನಡೆಯಲಿರುವ ಬಕ್ರೀದ್​ ಹಬ್ಬದ ನಿಮಿತ್ತ ಮಾರುಕಟ್ಟೆಗಳನ್ನೆಲ್ಲ ತೆರೆಯಬೇಕು ಎಂದು ಬೇಡಿಕೆಯನ್ನಿಟ್ಟಿದ್ದಾರೆ.ಇದನ್ನೂ ಓದಿ:ವಾರ್ಡ್​ಬಾಯ್​ಗೆ ಕೊಡಲು 30 ರೂ. ಇಲ್ಲದ್ದಕ್ಕೆ ಸ್ಟ್ರೆಚರ್​ ದೂಡಿದ 6ರ ಬಾಲಕ
ಬಕ್ರೀದ್​ಗೂ ಮುಂಚಿತವಾಗಿ ಮಾರುಕಟ್ಟೆಗಳು ತೆರೆಯಬೇಕು. ಆಗ ನಮಗೂ ಕುರಿಗಳನ್ನು ಖರೀದಿಸಲು ಸುಲಭವಾಗುತ್ತದೆ. ಈದ್​ ಸಂದರ್ಭದಲ್ಲಿ ದಿನಕ್ಕೆ ಎರಡು ಬಾರಿ ನಮಾಜ್ ಮಾಡಬೇಕಾಗುತ್ತದೆ. ಹಾಗಾಗಿ ಕೂಡಲೇ ಮಸೀದಿಗಳನ್ನು ತೆರೆಯಲು ಅವಕಾಶ ನೀಡಬೇಕು. ನಾವೂ ಕೂಡ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ, ಕರೊನಾ ವೈರಸ್​ನಿಂದ ದೇಶವನ್ನು ಮುಕ್ತಗೊಳಿಸುವಂತೆ ಬೇಡಿಕೊಳ್ಳುತ್ತೇವೆ. ನಮ್ಮ ಪ್ರಾರ್ಥನೆಯನ್ನು ಖಂಡಿತ ದೇವರು ಕೇಳುತ್ತಾನೆ. ಕರೊನಾ ನಿಯಂತ್ರಣಕ್ಕೆ ಬಂದು ಪರಿಸ್ಥಿತಿ ಸುಧಾರಿಸುತ್ತದೆ ಎಂದಿದ್ದಾರೆ.
ಉತ್ತರ ಪ್ರದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರುತ್ತಿರುವುದರಿಂದ ರಾಜ್ಯದಲ್ಲಿ ಪ್ರತಿ ವಾರಾಂತ್ಯದಲ್ಲಿ ಲಾಕ್​ಡೌನ್​ ಹೇರಲಾಗುವುದು ಎಂದು ಈಗಾಗಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ತಿಳಿಸಿದ್ದಾರೆ. (ಏಜೆನ್ಸೀಸ್)
ಕೊವಿಡ್​-19ನಿಂದ ತತ್ತರಿಸಿರುವ ಅಮೆರಿಕಕ್ಕೆ ಆಘಾತ; ಶುರುವಾಗಿದೆ ಮತ್ತೊಂದು ಅಪಾಯಕಾರಿ ಸಾಂಕ್ರಾಮಿಕ ರೋಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
