ಬೆಂಗಳೂರು:ಸ್ಯಾಂಡಲ್​ವುಡ್​ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೂ ಕರೊನಾ ಪಾಸಿಟಿವ್​ ದೃಢಪಟ್ಟಿದೆ.
ಕರೊನಾ ಪರೀಕ್ಷೆಗೆ ಒಳಪಟ್ಟಿದ್ದ ಧ್ರುವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಇಬ್ಬರಿಗೂ ಸೋಂಕು ಇರುವುದು ವರದಿಯಲ್ಲಿ ಗೊತ್ತಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಸೋಂಕಿನ ಗುಣಲಕ್ಷಣ ಕಂಡುಬಂದಿದೆ.
ಇದನ್ನೂ ಓದಿರಿವಧುಗೆ ಕರೊನಾ, ಮದುವೆಗೆ ಹೋದ 7 ಜನರಿಗೂ ಪಾಸಿಟಿವ್​!
ಸೋಂಕು ತಗುಲಿರುವ ಬಗ್ಗೆ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಧ್ರುವ ಸರ್ಜಾ, ‘ನನ್ನ ಹೆಂಡತಿ ಮತ್ತು ನಾನು ಕೋವಿಡ್​19 ಪರೀಕ್ಷೆ ಮಾಡಿಸಿಕೊಂಡಿದ್ದೇವೆ. ವರದಿ ಪಾಸಿಟಿವ್​ ಬಂದಿದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆ ದಾಖಲಾಗಿದ್ದೇವೆ. ಶೀಘ್ರವೇ ಗುಣಮುಖರಾಗಿ ಬರುವ ವಿಶ್ವಾಸವಿದೆ’ ಎಂದು ಹೇಳಿಕೊಂಡಿದ್ದಾರೆ.
‘ನಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ದಯವಿಟ್ಟು ಕೋವಿಡ್​ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಅವರು ಕೋರಿದ್ದಾರೆ.
My wife and I have both been tested positive for COVID-19 with mild symptoms and hence chosen to get ourselves hospitalised. I’m sure we’ll be back all fine! All those who were in close proximity with us please get yourselves tested and remain safe.ಜೈ ಆಂಜನೇಯ 💪🏼
— Dhruva Sarja (@DhruvaSarja)July 15, 2020

ಧ್ರುವ ಸರ್ಜಾ ಅವರ ಅಣ್ಣ ಚಿರಂಜೀವಿ ಸರ್ಜಾ ಇತ್ತೀಚೆಗೆ ಮೃತಪಟ್ಟಿದ್ದರು. ಈ ವೇಳೆ ಎಲ್ಲ ಕಾರ್ಯವನ್ನೂ ಸ್ವತಃ ಧ್ರುವ ಸರ್ಜಾ ಅವರೇ ಮುಂದೆ ನಿಂತು ಮಾಡಿದ್ದರು. ಇವರ ಕುಟುಂಬಕ್ಕೆ ಸಾಂತ್ವನ ಹೇಳಲೆಂದು ಹಲವು ಗಣ್ಯರು ಮನೆಗೂ ಭೇಟಿ ನೀಡಿದ್ದನ್ನು ಇದೇ ವೇಳೆ ಸ್ಮರಿಸಬಹದು.
ಅದ್ದೂರಿ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಬ್ರೇಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
