ಇಂದೋರ್​:ಕರೋನಾ ಸೋಂಕಿಗೆ ತುತ್ತಾದ ಆತ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ಗುಣಮುಖನಾಗಿ ಮನೆಗೆ ಹಿಂದಿರುಗಿದ್ದಾರೆ. ಆದರೆ, ನೆರೆಹೊರೆಯವರ ನಿರಂತರ ಕಿರುಕುಳ ಹಾಗೂ ಸಾಮಾಜಿಕ ಬಹಿಷ್ಕಾರದಿಂದಾಗಿ ಸ್ವಂತ ಮನೆ ಮಾರುವ ನಿರ್ಧಾರಕ್ಕೆ ಬಂದಿದ್ದಾರೆ.
ಮಧ್ಯಪ್ರದೇಶದ ಇಂದೋರ್​ನ ಕರೊನಾ ಸೋಂಕಿನಿಂದ ಗುಣಮುಖರಾಗಿರುವ ದೀಪಕ್​ ಶರ್ಮ ಎಂಬುವರ ಕಥೆ ಇದು. ಕೆಲದಿನಗಳ ಹಿಂದೆ ಇವರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಹಾಗಾಗಿ ಹೋಂ ಕ್ವಾರಂಟೈನ್​ನಲ್ಲಿ ಇರುವಂತೆ ವೈದ್ಯರು ತಿಳಿಸಿದ್ದರು. ಆದರೆ ಈ ವ್ಯಕ್ತಿ ಮನೆಯಿಂದ ಹೊರಬಂದು ಓಡಾಡುತ್ತಿದ್ದರು. ಇದು ನೆರೆಹೊರೆಯವರ ಆಕ್ರೋಶಕ್ಕೆ ಕಾರಣವಾಗಿತ್ತು.
ಆಗ ದೀಪಕ್​ ಅವರ ಕುಟುಂಬ ವರ್ಗದವರು ಮತ್ತು ನೆರೆಹೊರೆಯವರ ನಡುವೆ ವಾಗ್ವಾದ ಏರ್ಪಟ್ಟು, ಜಗಳವೂ ಆಗಿತ್ತು. ಆನಂತರದಲ್ಲಿ ದೀಪಕ್​ ಅವರಲ್ಲಿ ಸೋಂಕು ದೃಢಪಟ್ಟು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದೀಗ ಅವರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಆದರೂ ನೆರೆಹೊರೆಯವರು ಇವರ ವಿರುದ್ಧ ದ್ವೇಷ ಬೆಳೆಸಿಕೊಂಡಿದ್ದು, ಇವರ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಇದರಿಂದಾಗಿ ದವಸಧಾನ್ಯ ಖರೀದಿಸಲೂ ಇವರಿಗೆ ತೊಂದರೆಯಾಗಿದೆ. ಆದ್ದರಿಂದ, ತಾವಿರುವ ಮನೆಯನ್ನೇ ಮಾರುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಹೋದ ಪೊಲೀಸರು ಮತ್ತು ಶಿವಪುರಿ ಸಂಸದ ರಾಜೇಶ್​ ಚಂಡೇಲಾ ಎಲ್ಲ ರೀತಿಯ ಸಹಾಯ ಮಾಡುವುದಾಗಿ ದೀಪಕ್​ ಅವರ ಕುಟುಂಬಕ್ಕೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಕರೊನಾ ಸೋಂಕಿಗೆ ತುತ್ತಾಗಿ, ಚಿಕಿತ್ಸೆ ಪಡೆದು ಗುಣಮುಖರಾದವರು ಈ ರೀತಿಯ ಕಿರುಕುಳ ಅನುಭವಿಸುತ್ತಿರುವ ಮೊದಲ ಪ್ರಕರಣ ಇದೇನಲ್ಲ. ಕರೊನಾ ವಾರಿಯರ್ಸ್​ ಆಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ನರ್ಸ್​ಗಳು ಕೂಡ ಇದೇ ಬಗೆಯ ಕಿರುಕುಳಕ್ಕೆ ಒಳಗಾಗಿದ್ದಾರೆ.
ಮರಿಯಾನೆಯನ್ನು ಹೆಗಲ ಮೇಲೆ ಹೊತ್ತೊಯ್ದು ತಾಯಿ ಆನೆಯ ಮಡಿಲು ಸೇರಿಸಿದ್ದ ಅರಣ್ಯ ರಕ್ಷಕ, 2017ರ ಟ್ವೀಟ್​ ಮತ್ತೆ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
