ನವದೆಹಲಿ:ಭಾರತೀಯ ಕುಸ್ತಿ ಫೆಡರೇಶನ್​ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪ ಮಾಡಿರುವ ಕುಸ್ತಿ ಪಟುಗಳು ದೆಹಲಿಯ ಜಂತರ್ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಭಾರತೀಯ ಕುಸ್ತಿ ಫೆಡರೇಶನ್ ಹಾಗೂ ಕುಸ್ತಿಪಟುಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ.
ಭಾರತದ ಖ್ಯಾತ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ, ವಿನೇಶ್ ಪೋಗಟ್, ಸಾಕ್ಷಿ ಮಲಿಕ್ ಸೇರಿದಂತೆ ಹಲವು ಕ್ರೀಡಾಪಟುಗಳು ಈ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಧರಣಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಬೃಂದಾ ಕಾರಾಟ್ ಹಾಗೂ ಸಿಪಿಐ ನಾಯಕಿಯರನ್ನು ಧರಣಿಯಿಂದಲೇ ಹೊರಕಳುಹಿಸಿರುವಂತಹ ಪ್ರಸಂಗ ನಡೆದಿದೆ.
#WATCH| CPI(M) leader Brinda Karat asked to step down from the stage during wrestlers' protest against WFI at Jantar Mantar in Delhi.pic.twitter.com/sw8WMTdjsk— ANI (@ANI)January 19, 2023
#WATCH| CPI(M) leader Brinda Karat asked to step down from the stage during wrestlers' protest against WFI at Jantar Mantar in Delhi.pic.twitter.com/sw8WMTdjsk
ಕ್ರೀಡಾಪಟುಗಳು ಸೇರಿಕೊಂಡು ಧರಣಿ ನಡೆಸುತ್ತಿದ್ದೇವೆ. ಇಲ್ಲಿ ಬಂದು ರಾಜಕೀಯ ಮಾಡಬೇಡಿ. ದಯಮಾಡಿ ವೇದಿಕೆಯಿಂದ ಹೊರಹೋಗಿ ಎಂದು ಕುಸ್ತಿಪಟು ಭದರಂಗ್ ಪೂನಿಯಾ ಹೇಳಿದ್ದಾರೆ. ಇದರಿಂದ ಧರಣಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಬೃಂದಾ ಕಾರಾಟ್​ ಮುಜುಗರಕ್ಕೆ ಒಳಗಾಗುವಂತಾಗಿದೆ.
ಧರಣಿ ನಡೆಯುತ್ತಿದ್ದಲ್ಲಿ ತೀವ್ರ ಮುಜುಗರಕ್ಕೆ ಒಳಗಾಗುತ್ತಿದ್ದಂತೆ ಬೃಂದಾ ಕಾರಾಟ್ ಹಾಗೂ ಸಿಪಿಐ ನಾಯಕಿಯರು ಸ್ಥಳದಿಂದ ಹೊರನಡೆದಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 − 3 =
Remember me
