ಕೋಲ್ಕತ:ಕರೊನಾ ಹಾವಳಿ ಹಿನ್ನೆಲೆಯಲ್ಲಿ ಈ ಸಲ ದೀಪಾವಳಿಗೆ ಪಟಾಕಿ ಹೊಡೆಯಬೇಕೋ ಬೇಡವೋ ಎಂಬುದು ಕೆಲವು ರಾಜ್ಯಗಳಲ್ಲಿ ಮುನ್ನೆಲೆಗೆ ಬಂದಿರುವ ನಡುವೆ ಈ ರಾಜ್ಯದಲ್ಲಿ ಪಟಾಕಿ ನಿಷೇಧದ ಕುರಿತು ಈಗಾಗಲೇ ಆದೇಶ ಹೊರಬಿದ್ದಿದೆ.
ಪಟಾಕಿ ಸಿಡಿತದ ಹೊಗೆಯಿಂದ ಕರೊನಾ ಸೋಂಕು ಹೆಚ್ಚುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯ ಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಅದಕ್ಕೆಂದೇ ಪ್ರತ್ಯೇಕ ಸಮಿತಿಯೊಂದನ್ನು ರಚಿಸಿ ಅಭಿಪ್ರಾಯ ಕೇಳಿದೆ. ಆ ಸಮಿತಿ ನೀಡುವ ವರದಿ ಮೇರೆಗೆ ಪಟಾಕಿ ಕುರಿತು ನಿರ್ಧಾರ ತಳೆಯಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ಇನ್ನು ದೆಹಲಿಯಲ್ಲಿ, ಪಟಾಕಿ ಹೊಡೆಯುವುದರಿಂದ ನಿಮ್ಮ ಕುಟುಂಬದವರ ಜೀವದ ಜತೆ ಚೆಲ್ಲಾಟವಾಡಿದಂತೆ. ಆದ್ದರಿಂದ ಏನೇ ಆಗಲಿ ದಯವಿಟ್ಟು ಯಾರೂ ಪಟಾಕಿ ಹೊಡೆಯಬೇಡಿ ಎಂದು ಅಲ್ಲಿನ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ.
ಮತ್ತೊಂದೆಡೆ ಪಶ್ಚಿಮ ಬಂಗಾಲ ಸರ್ಕಾರ ಕೂಡ ದೀಪಾವಳಿಗೆ ಪಟಾಕಿ ಹೊಡೆಯದಂತೆ ಅಲ್ಲಿನ ಜನತೆ ಬಳಿ ಮನವಿ ಮಾಡಿಕೊಂಡಿತ್ತು. ಇದೀಗ ಅದಕ್ಕೆ ಪೂರಕ ಎಂಬಂತೆ ಕೋಲ್ಕತ ಹೈಕೋರ್ಟ್ ದೀಪಾವಳಿ ಹಾಗೂ ಕಾಳಿಪೂಜೆಗಾಗಿ ಪಟಾಕಿ ಮಾರುವುದು ಹಾಗೂ ಬಳಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
