ತಾಡೆಪಲ್ಲಿ:ಭಾರತದ ಮಾಜಿ ಕ್ರಿಕೆಟಿಗ ಹಾಗೂ 2023ರ ಐಪಿಎಲ್ ಟ್ರೋಫಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸದಸ್ಯರಾಗಿ ತಮ್ಮ ಕೊನೆಯ ಪಂದ್ಯವನ್ನು ಆಡಿದ ಕ್ರಿಕೆಟಿಗ ಅಂಬಟಿ ರಾಯುಡು ಆಂಧ್ರಪ್ರದೇಶದ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿಯನ್ನು ಭೇಟಿ ಮಾಡಿದ್ದು, ಇದು ರಾಜಕೀಯ ವಲಯದಲ್ಲಿ ಗುಸುಗುಸು ಎಬ್ಬಿಸಿದೆ.
ಇದನ್ನೂ ಓದಿ:ಯುವತಿ ಕರೆದಳೆಂದು ಹೋಟೆಲ್​ಗೆ ಹೋದ ಯುವಕ ತಡವಾಗಿ ಅಲರ್ಟ್​ ಆದರೂ ತಪ್ಪಲಿಲ್ಲ ಆಘಾತ!
ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಎನ್.ಶ್ರೀನಿವಾಸನ್ ಪುತ್ರಿ ರೂಪಾ ಗುರುನಾಥ್ ಜತೆ ಸಿಎಂರನ್ನು ಬೇಟಿ ಮಾಡಿದ ರಾಯಡು, ಟ್ವಿಟರ್​ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಸಿಎಂ, ರೂಪಾ ಮೇಡಮ್​ ಮತ್ತು ಸಿಎಸ್‌ಕೆ ಮ್ಯಾನೇಜ್‌ಮೆಂಟ್ ವಿಶ್ವದರ್ಜೆಯ ಕ್ರೀಡಾ ಮೂಲಸೌಕರ್ಯ ಮತ್ತು ಹಿಂದುಳಿದವರಿಗೆ ಶಿಕ್ಷಣದ ಅಭಿವೃದ್ಧಿ ಕುರಿತು ಚರ್ಚಿಸಲು ಸಭೆ ನಡೆಸಿದೆವು. ನಮ್ಮ ರಾಜ್ಯದ ಯುವಕರಿಗಾಗಿ ಸರ್ಕಾರ ಸದೃಢವಾದ ಕಾರ್ಯಕ್ರಮ ರೂಪಿಸುತ್ತಿದೆ ಎಂದ ಹೇಳಿದ್ದಾರೆ.
ಆದರೆ ಮೂಲತಃ ಆಂಧ್ರಪ್ರದೇಶದವರಾದ ರಾಯುಡು ಕ್ರೀಡೆಯಿಂದ ನಿವೃತ್ತಿ ಘೋಷಿಸಿದ ನಂತರ, ಹಲವಾರು ರಾಜಕೀಯ ಪಕ್ಷಗಳು ಅವರನ್ನು ಸಂಪರ್ಕಿಸಿವೆ. ಮುಂದಿನ ತೆಲಂಗಾಣ, ಆಂಧ್ರಪ್ರದೇಶ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಭರವಸೆ ನೀಡಿವೆ ಎನ್ನಲಾಗಿದೆ. ರಾಯಡು ವೈಎಸ್‌ಆರ್‌ಸಿ ಪಕ್ಷಕ್ಕೆ ಸೇರಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು, ಇತ್ತೀಚೆಗೆ ರೆಡ್ಡಿಯನ್ನು ಬೆಂಬಲಿಸಿ ಸರಣಿ ಟ್ವೀಟ್‌ಗಳನ್ನು ಬರೆದಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + one =
Remember me
