ಮುಂಬೈ:ಮಹಿಳೆಯರ ಮೇಲಿನ ದೌರ್ಜನ್ಯವು ಕ್ಷಮಿಸಲಾಗದ ಪಾಪ, ತಪ್ಪಿಸ್ಥರನ್ನು ಉಳಿಸಬಾರದು ಎಂದು ಪ್ರಧಾನಿ ಮೋದಿ ಹೇಳಿದರು. ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳ ಶಕ್ತಿಯನ್ನು ಹೆಚ್ಚಿಸುವುದರ ಜತೆಗೆ ಅವರ ಸುರಕ್ಷತೆಯೂ ದೇಶದ ಆದ್ಯತೆಯಾಗಿದೆ. ನಾನು ಈ ವಿಷಯವನ್ನು ಕೆಂಪು ಕೋಟೆಯಿಂದ ಪದೇಪದೆ ಪ್ರಸ್ತಾಪಿಸಿದ್ದೇನೆ ಎಂದು ತಿಳಿಸಿದರು.
ಇದನ್ನು ಓದಿ:ಮಿಸ್​ ಇಂಡಿಯಾದಲ್ಲಿ ಮೀಸಲಾತಿ ವಿಚಾರ; ರಾಹುಲ್​ಗಾಂಧಿ ಹೇಳಿಕೆ ಬಾಲಿಶ ಎಂದು ಕೇಂದ್ರ ಸಚಿವ ವ್ಯಂಗ್ಯ
ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ಮಹಿಳೆಯರ ಮೇಲಿನ ದೌರ್ಜನ್ಯವು ಅಕ್ಷಮ್ಯ ಪಾಪ ಎಂದು ಮತ್ತೊಮ್ಮೆ ದೇಶದ ಪ್ರತಿಯೊಂದು ರಾಜಕೀಯ ಪಕ್ಷಗಳಿಗೆ, ಪ್ರತಿಯೊಂದು ರಾಜ್ಯ ಸರ್ಕಾರಕ್ಕೂ ಹೇಳುತ್ತೇನೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರನ್ನು ಬಿಡಬಾರದು ಎಂದು ಪ್ರಧಾನಿ ಮೋದಿ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.
ಅಪರಾಧಿಗಳಿಗೆ ಯಾವುದೇ ರೂಪದಲ್ಲಿ ಸಹಾಯ ಮಾಡುವವರನ್ನು ಬಿಡಬಾರದು. ಆಸ್ಪತ್ರೆಯಾಗಿರಲಿ, ಶಾಲೆಯಾಗಿರಲಿ, ಸರ್ಕಾರವಿರಲಿ, ಪೊಲೀಸ್ ವ್ಯವಸ್ಥೆಯಾಗಿರಲಿ ಯಾವುದೇ ಹಂತದಲ್ಲಿ ನಿರ್ಲಕ್ಷ್ಯ ನಡೆದರೂ ಎಲ್ಲರೂ ಜವಾಬ್ದಾರರಾಗಿರಬೇಕು ಎಂದು ಸೂಚಿಸಿದ್ದಾರೆ. ಮಹಿಳೆಯರ ಜೀವ ರಕ್ಷಿಶಿಸುವುದು ಹಾಗೂ ಅವರ ಘನತೆಯನ್ನು ಕಾಪಾಡುವುದು ನಮ್ಮೆಲ್ಲರ ದೊಡ್ಡ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಸಮಯದಲ್ಲಿ ಪ್ರಧಾನಿ ಅವರ ಈ ಹೇಳಿಕೆ ಬಂದಿದೆ.(ಏಜೆನ್ಸೀಸ್​​)
2026ರ ವೇಳೆಗೆ ನಕ್ಸಲ್​ ಹಿಂಸಾಚಾರದಿಂದ ಮುಕ್ತವಾಗಲಿದೆ ಭಾರತ; ಅಮಿತ್​​ ಷಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + five =
Remember me
