ನವದೆಹಲಿ:ಜೆಎನ್​ಯು ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಹಿಂಸಾಚಾರ ಪ್ರಕರಣವನ್ನು ದೆಹಲಿ ಪೊಲೀಸರು ಸೋಮವಾರ ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ. ಕ್ರೈ ಬ್ರ್ಯಾಂಚ್​ ಪೊಲೀಸರ ಎರಡು ತಂಡ ಪ್ರಕರಣದ ತನಿಖೆ ನಡೆಸಲಿದೆ.
ಈಗಾಗಲೇ ವಿವಿಯ ಉಪಕುಲಪತಿ ಮತ್ತು ರಿಜಿಸ್ಟ್ರಾರ್​ ಅವರು ದೆಹಲಿ ಲೆಫ್ಟಿನೆಂಟ್​ ಗವರ್ನರ್​ ಅನಿಲ್​ ಬೈಜಾಲ್ ಅವರನ್ನು ಭೇಟಿಯಾಗಿ ಜೆಎನ್​ಯುವಿನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ವಿವರಿಸಿದ್ದಾರೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪರಾಧ ವಿಭಾಗದ ಪೊಲೀಸ್​ ಅಧಿಕಾರಿಗಳು ಈಗಾಗಲೇ ಕೆಲವು ಸಾಕ್ಷಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದು, ವಿದ್ಯಾರ್ಥಿಗಳೊಂದಿಗೆ ಕೂಡ ಮಾತುಕತೆ ನಡೆಸುತ್ತಿದ್ದಾರೆ.
ನೈಋತ್ಯ ಪೊಲೀಸ್ ಉಪ ಆಯುಕ್ತ ದೇವೇಂದ್ರ ಆರ್ಯ ಹಾಗೂ ಜಂಟಿ ಪೊಲೀಸ್​ ಆಯುಕ್ತ ಆನಂದ್​ ಮೋಹನ್​ ಅವರು ವಿವಿ ಕ್ಯಾಂಪಸ್​ಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ಮಾಡಿದ್ದಾರೆ.  (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
