ಬಿಹಾರ:ತನ್ನ ಗಂಡನನ್ನು ಮರಕ್ಕೆ ಕಟ್ಟಿ ಹಾಕಿದ ಪತ್ನಿ, ಆತನನ್ನು ಜೀವಂತವಾಗಿ ಸುಡಲು ಯತ್ನಿಸಿದ ಘಟನೆ ಮುಜಾಫರ್‌ಪುರದ ದೇವಸರ್ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಪತಿ ಇಷ್ಟವಿಲ್ಲ ಆಕೆ ಈ ಕೃತ್ಯ ಎಸಗಿದ್ದಾಳೆ ಎಂದು ವರದಿಯಾಗಿದೆ.ಇದನ್ನೂ ಓದಿ:4 ತಿಂಗಳ ಮಗುವಿನ ಪಕ್ಕ ಹೆಡೆ ಬಿಚ್ಚಿದ ವಿಷ ಸರ್ಪ; ಕಂದಮ್ಮನ ಪ್ರಾಣ ಉಳಿಸಲು ತಾಯಿ ಮಾಡಿದ್ದೇನು?
ಶಂಭು ಕುಮಾರ್(26) ಕಳೆದ ವರ್ಷ ಜೂನ್ 7 ರಂದು ಗಿಜಾಸ್ ಗ್ರಾಮದ 22 ವರ್ಷದ ಛೋಟಿ ಕುಮಾರಿ ಎಂಬಾಕೆಯೊಂದಿಗೆ ವಿವಾಹವಾಗಿದ್ದ. ಛೋಟಿಗೆ ಪತಿ ಇಷ್ಟವಿರಲಿಲ್ಲ. ಹೀಗಾಗಿ ಗಂಡನನ್ನು ಜೀವಂತವಾಗಿ ಸುಟ್ಟು ಹತ್ಯೆ ಮಾಡಲು ಮುಂದಾಗಿದ್ದಾಳೆ. ಪತಿ ಮೊದಲು ಬಲೆಯಲ್ಲಿ ಸಿಲುಕಿ ಹಾಕಿಕೊಳ್ಳುವಂತೆ ಮಾಡಿ, ಮರಕ್ಕೆ ಕಟ್ಟಿ ಹಾಕಿದ್ದಾಳೆ. ಬಳಿಕ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ. ಘಟನೆಯಲ್ಲಿ ಶಂಭು ಕುಮಾರ್​ಗೆ ಶೇ.60ರಷ್ಟು ಸುಟ್ಟ ಗಾಯಗಳಾಗಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇದನ್ನೂ ಓದಿ:ಎಕ್ಸ್​ಪ್ರೆಸ್​ ವೇಯಲ್ಲಿ ಮರವೇರಿ ಕುಳಿತ ಪೊಲೀಸರು; ಕಾರಣ ಇಷ್ಟೇ…
ಶಂಭು ಕುಮಾರ್ ನೀಡಿದ ದೂರಿನ ಮೇರೆಗೆ ಸಾಹೇಬ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಸದ್ಯ ಆರೋಪಿ ಛೋಟಿ ಕುಮಾರಿಯನ್ನು ಪೊಲೀಸರು ಬಂದಿಸಿದ್ದಾರೆ. ಮದುವೆಯಾದಾಗಿನಿಂದಲೂ ಪತ್ನಿ ನನ್ನೊಂದಿಗೆ ನಿತ್ಯವೂ ಜಗಳವಾಡುತ್ತಿದ್ದಳು. ಪತ್ನಿ ತವರು ಮನೆಯಿಂದ ಹಿಂತಿರುಗಿದ ಬಳಿಕ ಪ್ರೀತಿಸುವ ನೆಪದಲ್ಲಿ ಮನೆಯ ಹಿಂದಿನ ತೋಟಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದಾಳೆ ಎಂದು ಸಂತ್ರಸ್ತ ಶಂಭು ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾನೆ.
ಮರಕ್ಕೆ ಕಟ್ಟಿ ಹಾಕಿ ಪತ್ನಿ ಬೆಂಕಿ ಹಚ್ಚುತ್ತಿದ್ದಂತೆ ಶಂಭುಕುಮಾರ್​ ಜೋರಾಗಿ ಕೂಗಲು ಪ್ರಾರಂಭಿಸಿದ್ದಾನೆ. ಧ್ವನಿ ಕೇಳಿ ಹತ್ತಿರದ ನಿವಾಸಿಗಳು ಬಂದು ನೋಡಿದ್ದಾರೆ. ಕೂಡಲೇ ಸುಡುತ್ತಿದ್ದ ಶಂಭು ಕುಮಾರ್​ನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
