ಬಿಹಾರ: 14 ವರ್ಷದ ಬಾಲಕನನ್ನು ಕೊಂದು ತಿಂದ ಮೊಸಳೆಯನ್ನು, ನದಿ ದಡದಲ್ಲಿದ್ದ ಜನ ದೊಣ್ಣೆ, ರಾಡ್‍ನಿಂದ ಹೊಡೆದು ಹತ್ಯೆ ಮಾಡಿದ ಘಟನೆ ವೈಶಾಲಿ ಜಿಲ್ಲೆಯ ರಾಘೋಪುರ ದಿಯಾರಾ ದ್ವೀಪದ ಖಾಲ್ಸಾ ಘಾಟ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಗೋಕುಲಪುರದ ನಿವಾಸಿ ಧರ್ಮೇಂದ್ರ ದಾಸ್ ಕುಟುಂಬ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಗಂಗಾ ನದಿಯ ದಡಕ್ಕೆ ಆಗಮಿಸಿದ್ದರು. ಬಾಲಕ ಅಂಕಿತ್ ನೀರು ತರಲೆಂದು ನದಿಗೆ ಇಳಿದಿದ್ದಾಗ, ಇದ್ದಕ್ಕಿದ್ದಂತೆ ಮೊಸಳೆಯೊಂದು ದಾಳಿ ಮಾಡಿದೆ. ಬಾಲಕನನ್ನು ನೀರಿನೊಳಗೆ ಎಳೆದುಕೊಂಡು ಹೋಗಿ ತಿಂದು ಹಾಕಿದೆ.
ಇದನ್ನೂ ಓದಿ:48ರ ಪ್ರಾಯದಲ್ಲಿ ಬಿಕಿನಿ ಧರಿಸಿ ಪೋಸ್ ನೀಡಿದ ಶಿಲ್ಪಾ ಶೆಟ್ಟಿ; ನಿಮ್ಮ ವಯಸ್ಸಿನ ಗುಟ್ಟೇನು ಎಂದ ಫ್ಯಾನ್ಸ್!
ಬಾಲಕನ ಕಿರುಚಾಟ ಕೇಳಿ ಪಾಲಕರ ಭಯ ಬಿದ್ದಿದ್ದಾರೆ. ಕುಟುಂಬಸ್ಥರು ಅಂಕಿತ್​ನನ್ನು ರಕ್ಷಿಸಲು ಯತ್ನಿಸಿದರಾದರೂ ಮೊಸಳೆ ದಾಳಿಯಿಂದ ಸಾವನ್ನಪ್ಪಿದ್ದ. ಸುದ್ದಿ ತಿಳಿದು ರೊಚ್ಚಿಗೆದ್ದ ಸ್ಥಳೀಯರು ನದಿಯ ಬಳಿ ಜಮಾಯಿಸಿ ಮೊಸಳೆಯನ್ನು ಬಲೆಗೆ ಬೀಳಿಸಿದ್ದಾರೆ. ಬಳಿಕ ದಡಕ್ಕೆ ಎಳೆದು ತಂದು ದೊಣ್ಣೆ ಮತ್ತು ರಾಡ್‌ನಿಂದ ಹೊಡೆದು ಸಾಯಿಸಿದ್ದಾರೆ.
ಇದನ್ನೂ ಓದಿ:ಅರ್ಚಕನಿಂದ ಪ್ರೇಯಸಿ ಹತ್ಯೆ ಪ್ರಕರಣ | ಗೂಗಲ್​ನಲ್ಲಿ ಹುಡುಕಾಡಿ ಜೀವ ತೆಗೆಯುವುದು ಹೇಗೆಂದು ತಿಳಿದುಕೊಂಡ ಆರೋಪಿ!
ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನದಿಯ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಮೊಸಳೆ ಘಾಟ್ ಬಳಿ ಬಂದಿದೆ. ಈ ಕುರಿತು ತನಿಖೆ ನಡೆಸಿ, ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಅರಣ್ಯಾಧಿಕಾರಿ ಅಮಿತಾ ರಾಜ್ ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − 5 =
Remember me
