ನವದೆಹಲಿ:ಕೊಲ್ಲಿ ರಾಷ್ಟ್ರಗಳಿಂದ ತಬ್ಲಿಘಿ ಜಮಾತ್​ ಸದಸ್ಯರ ಬ್ಯಾಂಕ್ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ಸಂದಾಯವಾಗಿದೆ ಎಂದು ದೆಹಲಿ ಪೊಲೀಸರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ತಬ್ಲೀಘಿ ಜಮಾತ್​ ಮಾರ್ಕಾಜ್ ನಿಧಿ ಬಗ್ಗೆ ತನಿಖೆ ಮಾಡುತ್ತಿರುವ ದೆಹಲಿ ಪೊಲೀಸರ ಅಪರಾಧ ವಿಭಾಗ ಇದನ್ನು ಪತ್ತೆ ಮಾಡಿದೆ.
ಕೊಲ್ಲಿ ರಾಷ್ಟ್ರಗಳು ಮತ್ತು ಖಾತೆದಾರರ ನಡುವೆ ಹಣ ಸಂದಾಯ ನಡೆದಿದೆ. ವಹಿವಾಟಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಕ್ರೈಂ ಬ್ರಾಂಚ್ ಶುಕ್ರವಾರ ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಿದೆ. ಈ ವಹಿವಾಟಿನಲ್ಲಿ ಭಾಗಿಯಾಗಿರುವವರು ನಿಜಾಮುದ್ದೀನ್ ಮಾರ್ಕಾಜ್ ಮತ್ತು ತಬ್ಲಿಘಿ ಜಮಾತ್ ಮುಖ್ಯಸ್ಥ ಮೌಲಾನಾ ಸಾದ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಮೌಲಾನಾ ಸಾದ್ ಅವರು 2 ಕೋಟಿ ರೂ.ಗಳ ಮೌಲ್ಯದ ಆಸ್ತಿ ಹಾಗೂ ಹಣವನ್ನು ಸಂಗ್ರಹಿಸಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.
ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ಸಭೆ ನಡೆಸಲು ಸಂಬಂಧಿಸಿದ ಕೇಂದ್ರದ ನಿರ್ವಹಣೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶಗಳನ್ನುತಬ್ಲಿಘಿ ಜಮಾತ್‌ನ ನಿಜಾಮುದ್ದೀನ್ ಪ್ರಧಾನ ಕಚೇರಿ ಉಲ್ಲಂಘಿಸಿದೆ ಎಂಬ ಆರೋಪದ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ವಿಭಾಗಗಳ ಅಡಿಯಲ್ಲಿ ಕ್ರಿಮಿನಲ್​​ ಪ್ರಕರಣ ದಾಖಲಿಸಲಾಗಿದೆ. (ಏಜೆನ್ಸೀಸ್​)
ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ: ಮಾರಾಟಕ್ಕೆ ಸಿಕ್ತು ಪರ್ಮಿಷನ್; ಹಾಗಾದ್ರೆ ಯಾವಾಗಿಂದ ಶುರುವಾಗ್ತವೆ ಮದ್ಯದಂಗಡಿಗಳು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 16 =
Remember me
