ಮುಂಬೈ:ಕಳೆದ ನವೆಂಬರ್​ನಲ್ಲಿ ಮಹಾರಾಷ್ಟ್ರ ರಾಜಕಾರಣದಲ್ಲಿ ಅದೆಂಥಾ ಹೈಡ್ರಾಮಾ ನಡೆದಿತ್ತು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.
ಒಂದೆಡೆ ಶಿವಸೇನೆ-ಕಾಂಗ್ರೆಸ್​-ಎನ್​ಸಿಪಿ ಮೈತ್ರಿ ಮಾಡಿಕೊಳ್ಳಲು ಎಲ್ಲ ಸಿದ್ಧತೆಯನ್ನೂ ಮಾಡಿಕೊಂಡಿದ್ದರೆ, ಎನ್​ಸಿಪಿ ಮುಖಂಡ ಅಜಿತ್​ ಪವಾರ್​ ರಾತ್ರೋರಾತ್ರಿ ಬಿಜೆಪಿಗೆ ಬೆಂಬಲ ನೀಡಿದ್ದರು. ಬೆಳ್ಳಂಬೆಳಗ್ಗೆ ಬಿಜೆಪಿಯ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಹಾಗೂ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಮತ್ತೆ ಬೆಂಬಲವನ್ನು ವಾಪಸ್​ ಪಡೆದು ಪಕ್ಷಕ್ಕೆ ಮರಳುವ ಮೂಲಕ ಬಿಜೆಪಿ ಸರ್ಕಾರ ಪತನಗೊಂಡಿತ್ತು.
ಅಂದಿನ ತಮ್ಮ ಅಲ್ಪಕಾಲದ ಬಂಡಾಯದ ಬಗ್ಗೆ ಅಜಿತ್ ಪವಾರ್​ ವಿಧಾನಸಭೆಯಲ್ಲಿ ಮಾತನಾಡಿದ್ದಾರೆ. ಆಗಿದ್ದು ಆಗಿ ಹೋಯಿತು ಎಂಬ ಧೋರಣೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಅಂದು ನಾನು ಏನು ಮಾಡಿದೆನೋ ಅದನ್ನು ಬಹಿರಂಗವಾಗಿಯೇ ಮಾಡಿದ್ದೇನೆ. ಕದ್ದುಮುಚ್ಚಿ ಏನೂ ಕುತಂತ್ರ ಮಾಡಲಿಲ್ಲ. ಬಳಿಕ ನಾನು ಅದನ್ನು ಸರಿಪಡಿಸಿಕೊಂಡೆ. ಅಲ್ಲಿಂದ ವಾಪಸ್​ ಬಂದೆ. ಸದ್ಯಕ್ಕೆ ನಾನು ಈ ಸರ್ಕಾರದಲ್ಲಿಯೇ ದೃಢವಾಗಿ ಇದ್ದೇನೆ ಎಂದು ಹೇಳಿದ್ದಾರೆ.
ಈಗಿನ ಶಿವಸೇನೆ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ಕೂಡ ಉಪಮುಖ್ಯಮಂತ್ರಿಯಾಗಿರುವ ಅಜಿತ್​ ಪವಾರ್ ಹಣಕಾಸು ಖಾತೆಯನ್ನೂ ನಿರ್ವಹಣೆ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್​ಗೆ ಸಂಬಂಧಪಟ್ಟಂತೆ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ಈ ರೀತಿ ಮಾತನಾಡಿದ್ದಾರೆ. (ಏಜೆನ್ಸೀಸ್​)
ರಾಷ್ಟ್ರರಾಜಧಾನಿಯಲ್ಲಿ ಭರ್ಜರಿ ಆಲಿಕಲ್ಲು ಮಳೆ, ಅನೇಕ ಕಡೆ ಟ್ರಾಫಿಕ್​ ಜಾಮ್​; ಸೋಷಿಯಲ್​ ಮೀಡಿಯಾದಲ್ಲಿ ಟ್ರೆಂಡ್ ಆಯ್ತು #Delhirains

VIDEO: ‘ಕರೊನಾ ಭಜನೆ’ ನೀವು ಕೇಳಿದ್ದೀರಾ? ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಅದ್ಭುತ ಮ್ಯೂಸಿಕ್​ನೊಂದಿಗಿನ ಈ ಹಾಡು ಕಾಮಿಡಿನಾ? ನಾನ್​ಸೆನ್ಸಾ?

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:nineteen + 13 =
Remember me
