ಲಖನೌ:ಹಾಲಿ ಐಪಿಎಲ್​ ಋತು ಅನೇಕ ಕಾರಣಗಳಿಗೆ ಹೆಚ್ಚು ಸದ್ದು ಮಾಡುತ್ತಿದ್ದು ಈ ಮಧ್ಯೆ ಅಭಿಮಾನಿಗಳು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿ ಚರ್ಚೆಯಲ್ಲಿ ಭಾಗಿಯಾಗುತ್ತಿದ್ದಾರೆ.
ಮೇ 01ರಂದು ಲಖನೌ ಹಾಗೂ ಬೆಂಗಳೂರು ನಡುವೆ ನಡೆದಿದ್ದ ಐಪಿಎಲ್​ ಪಂದ್ಯ ಮುಗಿದ್ದು 15ದಿನಗಳು ಕಳೆದರೂ ಸಹ ಅದರ ಬಿಸಿ ಇನ್ನು ಆರಿರುವಂತೆ ಕಾಣುತ್ತಿಲ್ಲ.
ಮೇ 01ರಂದು ನಡೆದ ಪಂದ್ಯದಲ್ಲಿ ಆರ್​ಸಿಬಿ ತಂಡದ ಸ್ಟಾರ್​ ಬ್ಯಾಟ್ಸ್​ಮ್ಯಾನ್ ವಿರಾಟ್​ ಕೊಹ್ಲಿ ಹಾಗೂ ಲಖನೌ ತಂಡದ ಆಟಗಾರರಾದ ನವೀನ್​-ಉಲ್​-ಹಕ್​, ಕೈಲ್​​ ಮೇಯರ್ಸ್​ ನಡುವೆ ಪಂದ್ಯ ಮುಗಿದ ಬಳಿಕ ಮಾತಿನ ಚಕಮಕಿ ಏರ್ಪಟ್ಟಿತ್ತು.
ಇದಾದ ಬಳಿಕ ಸಾಮಾಜಿಕ ಜಾಲತಾನಗಳಲ್ಲಿ ನವೀನ್​ ಹಾಗೂ ವಿರಾಟ್​ ಟೀಕೆ-ಟಿಪ್ಪಣಿಗಳ ಮೂಲಕ ಒಬ್ಬರ ಕಾಲನ್ನು ಮತ್ತೊಬ್ಬರು ಎಳೆದಿದ್ದರು.
ಇದನ್ನೂ ಓದಿ:ಗುದನಾಳದಲ್ಲಿ ಚಿನ್ನಾಭರಣ ಬಚ್ಚಿಟ್ಟು ಸಾಗಾಟ; ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನ
ಇದೀಗ ಹೊಸ ಘಟನೆಯೊಂದರಲ್ಲಿ ಮಂಗಳವಾರ ಮುಂಬೈ ಇಂಡಿಯನ್ಸ್​ ಹಾಗೂ ಲಖನೌ ಸೂಪರ್​ಜೈಂಟ್ಸ್​ ಪಂದ್ಯದ ವೇಳೆ ಅಫ್ಘಾನಿಸ್ತಾನ ಮೂಲದ ಆಟಗಾರರನ್ನು ಅಭಿಮಾನಿಗಳು ಕೊಹ್ಲಿ ಕೊಹ್ಲಿ ಎಂದು ಕೂಗುವ ಮೂಲಕ ಛೇಡಿಸಿದ್ದಾರೆ.
ಇನ್ನು ಈ ವಿಡಿಯೋ ಸಾಮಾಜಿಕ ವೈರಲ್​ ಆಗಿದ್ದು ಕೊಹ್ಲಿ ಕೊಹ್ಲಿ ಎಂದು ಕೂಗುತ್ತಿದ್ದು ಈ ವೇಳೆ ನವೀನ್​​ ಇನ್ನು ಜೋರಾಗಿ ಕೂಗುವಂತೆ ಹೇಳುತ್ತಿರುವುದು ಕಂಡು ಬರುತ್ತದೆ.
ಸದ್ಯ ಈ ವಿಡಿಯೋ ವೈರಲ್​ ಆಗಿದ್ದು ನೆಟ್ಟಿಗರು ಭಿನ್ನ-ವಿಭಿನ್ನ ಕಮೆಂಟ್​ಗಳ ಮೂಲಕ ತಮ್ಮ ಆಟಗಾರರನ ಪರ ನಿಲ್ಲುತ್ತಿದ್ದಾರೆ ಮತ್ತು ಈ ವಿಡಿಯೋ ಉಭಯ ಆಟಗಾರರ ನಡುವಿನ ತಾರಕಕ್ಕೆ ಸಾಕ್ಷಿಯಾಗಲಿದೆ ಎಂದು ಹೇಳಲಾಗಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:4 × 5 =
Remember me
