ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜೈಷ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಶಂಕಿತ ಉಗ್ರರು ಪೊಲೀಸ್ ಕಾರ್ಯಾಚರಣೆಯಲ್ಲಿ ಸೆರೆಸಿಕ್ಕಿದ್ದಾರೆ. ಆಗ್ನೇಯ ದೆಹಲಿಯ ಸರಾಯ್ ಕೇಲ್ ಖಾನ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಪೊಲೀಸ್ ಕಾರ್ಯಾಚರಣೆ ನಡೆದಿತ್ತು.
ಬಂಧಿತ ಉಗ್ರರನ್ನು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ದೋರು ಗ್ರಾಮದ ನಿವಾಸಿ ಅಬ್ದುಲ್ ಲತೀಫ್ ಮಿರ್ (22) ಮತ್ತು ಕುಪ್ವಾರಾ ಜಿಲ್ಲೆಯ ಹಟ್ ಮುಲ್ಲಾ ಗ್ರಾಮದ ನಿವಾಸಿ ಅಶ್ರಫ್ ಖತಾನಾ (20) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ನ್ಯಾಯಾಧೀಶರ ಸೋಗಿನ ಖತರ್‌ನಾಕ್ ಕಳ್ಳಿಯ ಸೆರೆ
ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬಂಧಿತರಿಂದ 2 ಸೆಮಿ ಆಟೋಮೆಟಿಕ್ ಪಿಸ್ತೂಲ್ ಹಾಗೂ 10 ಸಜೀವ ಕಾಟ್ರಿರ್ಜ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಿಗೆ, ಸಿಆರ್​ಪಿಎಫ್​ ದೆಹಲಿಯಲ್ಲಿ ಕಟ್ಟೆಚ್ಚರ ಘೋಷಿಸಿದೆ. (ಏಜೆನ್ಸೀಸ್)
ಲಕ್ಷ್ಮೀ ವಿಲಾಸ್ ಬ್ಯಾಂಕ್ ಗ್ರಾಹಕರ ಗಮನಕ್ಕೆ- ಡಿಸೆಂಬರ್ 16ರ ತನಕ ನಗದೀಕರಣಕ್ಕೆ 25,000 ರೂಪಾಯಿ ಮಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
