ಶ್ರೀನಗರ:ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧನೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:VIDEO| ವೇಗವಾಗಿ ಬಂದು ಟ್ರಕ್ ಗುದ್ದಿದ ತೀವ್ರತೆಗೆ ಬಸ್‌ ಹತ್ತಾರು ಅಡಿ ಹಿಂದೆ ಹೊಯ್ತು..ಮೃತ ಯೋಧನನ್ನು ಅಜಯ್ ಕುಮಾರ್ ಎಂದು ಗುರುತಿಸಲಾಗಿದ್ದು, ಶುಕ್ರವಾರ ಮಧ್ಯರಾತ್ರಿ ಸುಮಾರಿಗೆ SAIL ಚೆರ್ಸೂ ಪ್ರದೇಶದ ಬಳಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಮುಂಜಾನೆ 1.55ರ ಸುಮಾರಿಗೆ ಗುಂಡಿನ ಸದ್ದು ಆ ಪ್ರದೇಶದಲ್ಲಿ ಕೇಳಿಬಂದಿದೆ ಎನ್ನಲಾಗಿದ್ದು, ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ.
ಆತ್ಮಹತ್ಯೆಯ ಹಿಂದಿನ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲವಾದರೂ, ಮೃತದೇಹ ಪತ್ತೆಯಾದ ತಕ್ಷಣವೇ ಯೋಧನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಯೋಧನ ಪ್ರಾಣ ಪಕ್ಷಿ ಹಾರಿಹೋಗಿತ್ತು, ಇಂದು ನಂತರ ಆತನ ಶವಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.ಯೋಧನನ್ನು ಚೆಕ್ ಪೋಸ್ಟ್ ಕಾವಲು ಕಾಯಲು ಅವಂತಿಪೋರಾದ ಸೈಲ್ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. ಆತ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯ ಪತ್ರಿಯೊಂದಿ ವರದಿ ಮಾಡಿದೆ.
ಇದನ್ನೂ ಓದಿ:ಬಾಲಿವುಡ್​​ನ ಈ ನಟನಿಗ ಕಪಾಳಮೋಕ್ಷ ಮಾಡಿದರೆ ₹ 10 ಲಕ್ಷ ಬಹುಮಾನ ಎಂದ ಸಂಘಟನೆ: ಕಾರಣ ಹೀಗಿದೆ..
ಈ ಹಿಂದೆ ಏಪ್ರಿಲ್‌ನಲ್ಲಿ, ಒಡಿಶಾದ ರಾಯ್ಘರ್ ಪ್ರದೇಶದಲ್ಲಿ ಸಿಆರ್‌ಪಿಎಫ್ ಯೋಧನೊಬ್ಬ ತನ್ನ ಕಚೇರಿಯಲ್ಲಿ ಎಕೆ-47 ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಅಲ್ಲದೇ, ಕೆಲವು ದಿನಗಳ ಹಿಂದೆ, ಗುಜರಾತ್‌ನ ಗಾಂಧಿನಗರದಲ್ಲಿ ಸಿಆರ್‌ಪಿಎಫ್ ಸಬ್ ಇನ್ಸ್‌ಪೆಕ್ಟರ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 10 =
Remember me
