ಮುಂಬೈ:ಚೆನ್ನೈ ಸೂಪರ್ ಕಿಂಗ್ ವೇಗದ ಬೌಲರ್ ತುಷಾರ್ ದೇಶಪಾಂಡೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದು, ಈ ಕುರಿತಾದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.
ತುಷಾರ್ ತಮ್ಮ ಶಾಲೆಯ ಕ್ರಷ್ ನಭಾ ಗಡ್ಡಂವಾರ್​ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಜೋಡಿಯು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಬೆರಗು ಗೊಳಿಸಿದರು. ಮುಂಬೈನಲ್ಲಿ ನಡೆದ ಈ ಸಮಾರಂಭದಲ್ಲಿ ಕ್ರಿಕೆಟ್​ ಆಟಗಾರ ಶಿವಂ ದುಬೆ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.ಇದನ್ನೂ ಓದಿ:VIDEO | ಅಬ್ಬಬ್ಬಾ ಎಲ್ಲಿ ನೋಡಿದ್ರು ಜೇನುನೊಣ..ಇಡೀ ನಗರವೇ ಆವೃತ!
ನಭಾ ಗಡ್ಡಂವಾರ್​ ವೃತ್ತಿಯಿಂದ ಆರ್ಟಿಸ್ಟ್​ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಲಾಕೃತಿಗಳನ್ನು ಆಗಾಗ ಹಂಚಿಕೊಳ್ಳುತ್ತಲೇ ಇರುತ್ತಾರೆ. ಈ ವರ್ಷದ ಐಪಿಎಲ್​ನ ಚೆನ್ನೈ ಪಂದ್ಯದ ವೇಳೆಯೂ ಕ್ರೀಡಾಂಗಣದಲ್ಲಿ ಹಲವಾರು ಬಾರಿ ಕಾಣಿಸಿಕೊಂಡಿದ್ದರು.
ತುಷಾರ್ ಸಹ ಇನ್​ಸ್ಟಾಗ್ರಾಮ್​ನಲ್ಲಿ ನಭಾ ಜತೆಗಿನ ಸುಂದರವಾದ ಚಿತ್ರವನ್ನು ಹಂಚಿಕೊಂಡಿದ್ದು, ಈ ಜೋಡಿಗೆ ಭಾರತೀಯ ತಂಡದ ಕ್ರಿಕೆಟ್​ ಆಟಗಾರರು ಹಾಗೂ ಅನೇಕ ಅಭಿಮಾನಿಗಳು ಶುಭಾಶಯಗಳನ್ನು ಕೋರಿದ್ದಾರೆ.
ಮೇ 31ರಂದು ಅಹಮದಾಬಾದ್‌ನಲ್ಲಿ ಎದುರಾಳಿ ತಂಡ ಗುಜರಾತ್ ಟೈಟಾನ್ಸ್ ಅನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಸಿಎಸ್‌ಕೆ ಚಾಂಪಿಯನ್‌ಶಿಪ್ ಗೆದ್ದುಕೊಂಡಿತು. ಈ ಮುಂಚೆ ಚೆನ್ನೈ ತಂಡದ ರುತುರಾಜ್ ಗಾಯಕ್ವಾಡ್, ಮಹಾರಾಷ್ಟ್ರ ತಂಡದ ಕ್ರಿಕೆಟ್​ ಆಟಗಾರ್ತಿ ಉತ್ಕರ್ಷಾ ಪವಾರ್​ರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು ವಿವಾಹವಾಗಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + eleven =
Remember me
