ನವದೆಹಲಿ:ಭಾರತ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್​ ಧೋನಿಗೆ ಹೊಸ ಪ್ರಶ್ನೆಯೊಂದು ಎದುರಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಎಲ್ಲರೂ ಧೋನಿ ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಸ್ವತಃ ಧೋನಿಯೇ ಈ ಪ್ರಶ್ನೆಯನ್ನು ಎದುರಿಸಿದ್ದಾರೆ.
ಧೋನಿ ಬಿಜೆಪಿ ಪಕ್ಷಕ್ಕಾ ಸೇರುತ್ತಾರಾ? ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಧೋನಿ ನಿವೃತ್ತರಾಗಿದ್ದಾರೆ. ಧೋನಿ ಐಪಿಎಲ್​ನಿಂದ ನಿವೃತ್ತಿ ಹೊಂದಿದ ನಂತರ ರಾಜಕೀಯಕ್ಕೆ ಬರುತ್ತಾರಾ? ಎಂಬಿತ್ಯಾದಿ ಪ್ರಶ್ನೆಗಳು ಇದೀಗ ಜನರಲ್ಲಿ ಉದ್ಭವಿಸಲು ಕಾರಣವೊಂದಿದೆ.
ಹೌದು, ಮಹೇಂದ್ರ ಸಿಂಗ್ ಧೋನಿ ಸಮಾರಂಭವೊಂದರಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಬ್ಬರೂ ಹಸ್ತಲಾಘವ ಮಾಡಿಕೊಂಡಿದ್ದಾರೆ. ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗುತ್ತಿದ್ದಂತೆ ಸಾಕಷ್ಟು ವೈರಲ್ ಆಗಿದೆ. ಇದನ್ನು ನೋಡಿದ ಅಭಿಮಾನಿಗಳು, ಧೋನಿ ಬಿಜೆಪಿಗೆ ಸೇರಲಿದ್ದಾರೆ ಎಂದು ಮಾತನಾಡಿಕೊಂಡಿದ್ದಾರೆ.
Thala standing for National Anthem brings back memories!#MSDhoni& Shri#AmitShahat the India Cements Platinum Jubilee event today in Chennai.pic.twitter.com/GFt83cxco0— Prabhu (@Cricprabhu)November 12, 2022
Thala standing for National Anthem brings back memories!#MSDhoni& Shri#AmitShahat the India Cements Platinum Jubilee event today in Chennai.pic.twitter.com/GFt83cxco0
ಚೆನ್ನೈ ಮೂಲದ ಸಿಮೆಂಟ್ ಕಂಪೆನಿಗೆ 75 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಸಂಭ್ರಮದ ಕಾರ್ಯಕ್ರಮವನ್ನು ಕಂಪೆನಿ ಆಯೋಜಿಸಿತ್ತು. ಈ ಸಮಾರಂಭಕ್ಕೆ ಧೋನಿ ಆಗಮಿಸಿದ್ದರು. ಕಳೆದ ಅನೇಕ ವರ್ಷಗಳಿಂದ ಧೋನಿ ಈ ಸಿಮೆಂಟ್ ಕಂಪೆನಿಯ ರಾಯಭಾರಿ. ಹೀಗಾಗಿ ಧೋನಿ ಕಾರ್ಯಕ್ರಮದಲ್ಲಿ ತಮ್ಮ ಉಪಸ್ಥಿತಿ ತೋರಿಸಿದ್ದರು. ಈ ವೇಳೆ ಗೃಹಮಂತ್ರಿ ಅಮಿತ್ ಷಾ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಇಬ್ಬರ ಮುಖತಃ ಭೇಟಿ ಕಾರ್ಯಕ್ರಮದ ಮೂಲಕ ಆಗಿದೆ. ಈ ಸಂದರ್ಭದಲ್ಲಿ ಇಬ್ಬರೂ ಪರಸ್ಪರ ಮಾತನಾಡಿಕೊಂಡಿದ್ದಾರೆ. ಇವರಿಬ್ಬರ ಮಾತುಕತೆಯ ಫೋಟೋಗಳು ಇದೀಗ ವೈರಲ್ ಆಗುತ್ತಿದೆ.
Lieutenant Colonel MS Dhoni with Home Minister Amit Shah🔥pic.twitter.com/qB2LQyfVOO— Richi (@zindahoonyaar)November 12, 2022
Lieutenant Colonel MS Dhoni with Home Minister Amit Shah🔥pic.twitter.com/qB2LQyfVOO
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
