ನವದೆಹಲಿ:ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್​ಗಳ ಪ್ರವೇಶಕ್ಕೆ ಸಿಯುಇಟಿ – ಯುಜಿ ಪರೀಕ್ಷೆಯ ಅಂತಿಮ ಕೀ- ಉತ್ತರಗಳನ್ನು ಗುರುವಾರ ಪ್ರಕಟಿಸಿದ್ದು, ಶೀಘ್ರದಲ್ಲೇ ಫಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಿದೆ.
ಇದನ್ನೂ ಓದಿ:ದರ್ಬಾರ್ ಹಾಲ್, ಅಶೋಕ್ ಹಾಲ್ ಇನ್ಮುಂದೆ ‘ಗಣತಂತ್ರ’, ‘ಅಶೋಕ ಮಂಟಪ’ವಾಗಿ ಮರುನಾಮಕರಣ!
ಎನ್​ಟಿಎ ಜುಲೈ 7 ರಂದು ತಾತ್ಕಾಲಿಕ ಕೀ- ಉತ್ತರಗಳನ್ನು ಪ್ರಕಟಿಸಿತ್ತು. ವೇಳಾಪಟ್ಟಿಯ ಪ್ರಕಾರ ಜೂನ್ 30ರಂದೇ ಸಿಯುಇಟಿ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ( ಎನ್​ಟಿಎ) ಪ್ರಕಟ ಮಾಡಬೇಕಿತ್ತು. ಆದರೆ ಯುಜಿಸಿ – ನೆಟ್​, ಸಿಎಸ್​ಐಆರ್​- ಯುಜಿಸಿ ನೆಟ್​ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆರೋಪಗಳು ಬಂದಿದ್ದರಿಂದ ಫಲಿತಾಂಶ ತಡವಾಗಿದೆ ಎನ್ನಲಾಗಿದೆ.
63 ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಪರೀಕ್ಷೆಗೆ ದೇಶದಾದ್ಯಂತ 13.4 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದವರು ದೇಶದ 261 ಕೇಂದ್ರ, ರಾಜ್ಯ, ಡೀಮ್ಡ್ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಕೋರ್ಸ್​ಗಳಿಗೆ ಪ್ರವೇಶ ಪಡೆಯಬಹುದು.
ಮುಖ್ಯಮಂತ್ರಿಗಳ 1 ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಗುಡ್​ ನ್ಯೂಸ್​ : ಸರ್ಕಾರವೇ ಭರಿಸಲಿದೆ ಒಂದಿಷ್ಟು ವೆಚ್ಚ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:20 + 20 =
Remember me
