ನವದೆಹಲಿ:ದೇಶದಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ ಬಿಡುಗಡೆಯಾಗಿದ್ದು, 7 ಹಂತದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ಆರಂಭವಾಗಲಿದ್ದು, ಜೂನ್ 1 ರಂದು ಕೊನೆಯ ಹಂತದ ಮತದಾನದೊಂದಿಗೆ ಚುನಾವಣೆ ಮುಕ್ತಾಯವಾಗಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಈ ಹಂತದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಬೇಕಿದ್ದ ಕೆಲವು ಪ್ರವೇಶ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಇದನ್ನೂ ಓದಿ:ರೀಲ್ ಕ್ರೇಜ್​ನಲ್ಲಿ ದುಸ್ಸಾಹಸ.. ಕೆರೆಯಲ್ಲಿ ಬೆಂಕಿಗೆ ಹಾರಿದ ಯುವಕರು
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್​ಟಿಎ) ಈಗಾಗಲೇ ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶಕ್ಕಾಗಿ ಸಾಮಾನ್ಯ ವಿಶ್ವವಿದ್ಯಾನಿಲಯದ ಪ್ರವೇಶ ಪರೀಕ್ಷೆ -2024 ರ ದಿನಾಂಕಗಳನ್ನು ಪ್ರಕಟಿಸಿದೆ . ಮೇ 15 ಮತ್ತು 31 ರ ನಡುವೆ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಈ ಮೊದಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಚುನಾವಣೆ ಹಿನ್ನೆಲೆಯಲ್ಲಿ ಅಗತ್ಯ ಬಿದ್ದರೆ ದಿನಾಂಕಗಳನ್ನು ಪರಿಷ್ಕರಿಸಲಾಗುವುದು ಎಂದು ಈಗ ತಿಳಿಸಿದೆ.
ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯಿಂದಾಗಿ ಸಾಮಾನ್ಯ ವಿಶ್ವವಿದ್ಯಾನಿಲಯದ ಪ್ರವೇಶ ಪರೀಕ್ಷೆಯನ್ನು ( ಸಿಯುಇಟಿ ಯುಜಿ 2024 ) ಮುಂದೂಡುವ ಸಾಧ್ಯತೆಯಿದೆ.
ಅದೇ ರೀತಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ (ಯುಜಿಸಿ) ಅಧ್ಯಕ್ಷ ಜಗದೀಶ್ ಕುಮಾರ್ ಈ ತಿಂಗಳು ಲೋಕಸಭೆ ಚುನಾವಣೆ ವೇಳಾಪಟ್ಟಿಯನ್ನು ಆಧರಿಸಿ ಪರೀಕ್ಷೆಯ ದಿನಾಂಕಗಳನ್ನು ಬದಲಾಯಿಸಲಾಗುವುದು ಎಂದು ಹೇಳಿದ್ದಾರೆ.ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ (ಐಸಿಎಐ) ಮೇ ತಿಂಗಳಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಸಿಎ ಇಂಟರ್‌ಮೀಡಿಯೇಟ್ ಅಂತಿಮ ಪರೀಕ್ಷೆಯನ್ನು ಮುಂದೂಡಿದೆ. ಐಸಿಎಐ ಹೊಸ ವೇಳಾಪಟ್ಟಿಯನ್ನು ಮಾರ್ಚ್ 19 ರಂದು ಪ್ರಕಟಿಸಲಿದೆ.
ಮತ್ತೊಂದೆಡೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್ ಯುಜಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೇ 5 ರಂದು ದೇಶಾದ್ಯಂತ ಪರೀಕ್ಷೆ ನಡೆಯಲಿದೆ. ಚುನಾವಣಾ ವೇಳಾಪಟ್ಟಿ ಬಿಡುಗಡೆಯಾದ ಹಿನ್ನಲೆಯಲ್ಲಿ ಪರೀಕ್ಷಾ ದಿನಾಂಕ ಬದಲಾವಣೆ ಕುರಿತು ಎನ್ ಟಿಎ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.
ತಿರುಪತಿಗೆ ಹೋಗುವ ಮೆಮೊ ರೈಲುಗಳು ರದ್ದು: ಕಾರಣ ಇದೇ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
