ಮಹಾರಾಷ್ಟ್ರ:ಮಕ್ಕಳ ಆಟಿಕೆ ವಿಚಾರವಾಗಿ ಜಲಗಾಂವ್ ಜಿಲ್ಲೆಯ ಅಮಲ್ನೇರ್‌ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ನಗರದಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ವಿಧಿಸಿ, 31 ಜನರನ್ನು ಅರೆಸ್ಟ್​​​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 9 ರಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಕ್ಕಳ ಆಟಿಕೆಗಳ ಬಗ್ಗೆ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದಾಗ ಈ ಘಟನೆ ಸಂಭವಿಸಿದೆ. ನಂತರ ವಾದವು ಹಿಂಸಾತ್ಮಕ ತಿರುವು ಪಡೆದುಕೊಂಡಿತು ಮತ್ತು ಎರಡೂ ಗುಂಪುಗಳು ಪರಸ್ಪರ ಇಟ್ಟಿಗೆಯಿಂದ ಹೊಡೆದು ಕೊಂಡಿದ್ದಾರೆ.
ಇದನ್ನೂ ಓದಿ:“ನನ್ನ ಹೆಂಡತಿ ನನ್ನನ್ನು ಸೋಲಿಸಿದಳು” ಎಂದು ಟ್ವೀಟ್ ಮಾಡಿದ ಭಾರತದಲ್ಲಿನ ಜಪಾನ್ ರಾಯಭಾರಿ! ಪ್ರಧಾನಿ ಮೋದಿ ಪ್ರತಿಕ್ರಿಯೆ ಹೀಗಿತ್ತು…
ಘಟನೆಗೆ ಸಂಬಂಧಿಸಿದಂತೆ 100 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 31 ಜನರನ್ನು ಬಂಧಿಸಲಾಗಿದೆ. ಘರ್ಷಣೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಬದಿಯ ಮಾರಾಟಗಾರರ ಬಂಡಿಯನ್ನು ಉರುಳಿಸಿರುವುದನ್ನು ಮತ್ತು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾದ ಇಟ್ಟಿಗೆಯ ತುಂಡುಗಳು ಬಿದ್ದಿರುವ ದೃಶ್ಯ ಕಂಡು ಬಂದಿದೆ.
ಇದನ್ನೂ ಓದಿ:ಮಹಿಳೆಯರಿಗೆ ಶಕ್ತಿ ತುಂಬಲು ಶಕ್ತಿ ಯೋಜನೆ ಜಾರಿಗೆ: ಟೀಕೆಗಳಿಗೆ ಸೊಪ್ಪು ಹಾಕಲ್ಲ ಎಂದ ಸಿಎಂ ಸಿದ್ದು
ಕಾನೂನು ಸುವ್ಯವಸ್ಥೆ ಕಾಪಾಡಲು ಜೂನ್ 10 ರಂದು ಬೆಳಿಗ್ಗೆ 11 ರಿಂದ ಜೂನ್ 12 ರ ಬೆಳಿಗ್ಗೆ 11 ರವರೆಗೆ ಕರ್ಫ್ಯೂ ವಿಧಿಸಲಾಗಿದೆ. ಅಗತ್ಯವಿದ್ದರೆ ಕರ್ಫ್ಯೂ ವಿಸ್ತರಿಸಬಹುದು. ಕರ್ಫ್ಯೂ ಜಾರಿಯಾಗುವವರೆಗೂ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕರ್ಫ್ಯೂ ಜಾರಿಯಾದಾಗಿನಿಂದ ಪರಿಸ್ಥಿತಿ ಶಾಂತಿಯುತವಾಗಿದೆ. ಇಲ್ಲಿಯವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ.
ಜಲಗಾಂವ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಎಂ ರಾಜ್‌ಕುಮಾರ್ ಮಾತನಾಡಿ, ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಸಣ್ಣ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಕರ್ಫ್ಯೂ ಸಮಯದಲ್ಲಿ ಜನರು ತಮ್ಮ ಮನೆಗಳಲ್ಲಿಯೇ ಇದ್ದು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.
ತನ್ನನ್ನೇ ತಾನು ಮದುವೆಯಾದ ಮಹಿಳೆಗೆ ಮೊದಲ ವಿವಾಹ ವಾರ್ಷಿಕೋತ್ಸವ ಸಂಭ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + six =
Remember me
