ಜೈಪುರ:ದೇಶದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಬಹುಶಃ ಕುತೂಹಲ ಮತ್ತು ಇಂಟರ್ನೆಟ್​ ಕಾರಣ ಇರಬಹುದೆಂದು ರಾಜಸ್ಥಾನದ ಡಿಜಿಪಿ ಭೂಪೇಂದ್ರ ಸಿಂಗ್​ ಯಾದವ್​ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದ ಹಾಥರಸ್​ನಲ್ಲಿ ನಡೆದಿದೆ ಎನ್ನಲಾದ​ ಗ್ಯಾಂಗ್​ರೇಪ್​ ಪ್ರಕರಣ ಸೇರಿದಂತೆ ದೇಶದಲ್ಲಿ ಹೆಚ್ಚಾಗಿ ಬೆಳಕಿಗೆ ಬರುತ್ತಿರುವ ರೇಪ್​ ಪ್ರಕರಣಗಳ ಬೆನ್ನಲ್ಲೇ ರಾಜಸ್ಥಾನ ಡಿಜಿಪಿ ತಮ್ಮ ಅಭಿಮತವನ್ನು ವ್ಯಕ್ತಪಡಿಸಿದ್ದಾರೆ. ನಿರುದ್ಯೋಗ, ಯುವ ಜನಸಂಖ್ಯಾ ಏರಿಕೆ, ಇಂಟರ್ನೆಟ್​ ಮತ್ತು ಕುತೂಹಲವೇ ಅಪರಾಧ ಪ್ರಕರಣಗಳ ಹೆಚ್ಚಳಕ್ಕೆ ಕಾರಣಗಳಾಗಿವೆ ಎಂದು ಹೇಳಿಕೆ ನೀಡಿದ್ದಾರೆ.
ಇಡೀ ಉತ್ತರ ಭಾರತದಲ್ಲಿ ಕಳೆದ ಕೆಲ ವರ್ಷಗಳಿಂದ ಕ್ರೂರ ಅಪರಾಧಗಳು ಹೆಚ್ಚುತ್ತಲೇ ಇರುವುದು ನಮ್ಮ ಅನುಭವಕ್ಕೆ ಬಂದಿದೆ. ಇದಕ್ಕೆ ಹಲವು ಕಾರಣಗಳಿವೆ. ಕೆಲ ಮಕ್ಕಳು ಇಂಟರ್ನೆಟ್​ ಅನ್ನು ಸ್ಪೂರ್ತಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ:ಅಕ್ಕನ ಮಗನ ಹೊಟ್ಟೆ ಬಗೆದು ರಕ್ತ ಕುಡಿದಳು, ಹೃದಯವನ್ನೂ ಕಿತ್ತೆಸೆದಳು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಘಟನೆ ಇದು!
ಇನ್ನು ಯುವಕರಲ್ಲಿ ಕುತೂಹಲವು ಸಹ ಅಪರಾಧಗಳಿಗೆ ಪ್ರಚೋದನೆಯಾಗಿದೆ. ಸಾಮಾನ್ಯವಾಗಿ 18 ವರ್ಷಕ್ಕಿಂತ ಕೆಳಗಿನವರಿಗೆ ಸಂಬಂಧಗಳಲ್ಲಿ ಪ್ರವೇಶಿಸಲು ಕಾನೂನಾತ್ಮಕವಾಗಿ ಅವಕಾಶ ನೀಡುವುದಿಲ್ಲ. ಆದರೆ, ಇದೇ ಕುತೂಹಲದಿಂದ ಅಂತರ್ಜಾಲದಲ್ಲಿ ಅವರು ಏನನ್ನು ನೋಡುತ್ತಾರೆ, ಅದರ ಫಲಿತಾಂಶ ಫ್ರೆಂಡ್​ಶಿಪ್​ನಲ್ಲಿ ಬರುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಅನೇಕ ಅತ್ಯಾಚಾರ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ವರದಿಯಾಗುತ್ತಲೇ ಇವೆ. ಅದರಲ್ಲೂ ಹಾಥರಸ್​ನಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್​ರೇಪ್​ ಪ್ರಕರಣ ದೇಶಾದ್ಯಂತ ಆಕ್ರೋಶದ ಕಿಚ್ಚು ಹಚ್ಚಿದೆ. ಇದೇ ಸಮಯದಲ್ಲಿ ಡಿಜಿಪಿ ಹೇಳಿಕೆ ನೀಡಿರುವುದು ಚರ್ಚೆ ಹುಟ್ಟು ಹಾಕಿದೆ.(ಏಜೆನ್ಸೀಸ್​)
https://www.vijayavani.net/s-election-officer-trangender/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 7 =
Remember me
