ಹೈದರಾಬಾದ್:ದೇಶದಲ್ಲಿ ಪ್ರಜಾಪ್ರಭುತ್ವ ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರದ ಸರ್ವಾಧಿಕಾರಿ ಸರ್ಕಾರ ಕಿತ್ತೊಗೆಯಲು ಪಕ್ಷದ ಕಾರ್ಯಕರ್ತರು ಒಗ್ಗಟ್ಟು ಹಾಗೂ ಶ್ರದ್ಧೆಯಿಂದ ಕೆಲಸ ಮಾಡಬೇಕೆಂದು ಎಐಸಿಸಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
ಪರಸ್ಪರ ಭಿನ್ನಮತ ಮತ್ತು ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ಪಕ್ಷದ ಯಶಸ್ಸಿಗೆ ದಣಿವರಿಯದೆ ದುಡಿಯುವಂತೆಯೂ ಅವರು ಸಲಹೆ ಮಾಡಿದ್ದಾರೆ. ಕಾರ್ಯಕರ್ತರು ತಾಳ್ಮೆಯಿಂದ ಇರಬೇಕು, ಪಕ್ಷದ ಹಿತಕ್ಕೆ ಹಾನಿಯಾಗುವ ರೀತಿಯಲ್ಲಿ ನಾಯಕರ ವಿರುದ್ಧ ಮಾಧ್ಯಮಗಳಿಗೆ ಯಾವುದೇ ರೀತಿಯ ಹೇಳಿಕೆ ನೀಡಬಾರದು ಎಂದೂ ಭಾನುವಾರ ಹೈದರಾಬಾದ್​ನಲ್ಲಿ ನಡೆದ ಕಾಂಗ್ರೆಸ್ ಕಾರ್ಯ ಸಮಿತಿಯ (ಸಿಡಬ್ಲ್ಯುಸಿ) ವಿಸ್ತರಿತ ಅಧಿವೇಶನದಲ್ಲಿ ಖರ್ಗೆ ಹೇಳಿದರು.
ಸೈದ್ಧಾಂತಿಕ ಸ್ಪಷ್ಟತೆಯೊಂದಿಗೆ ಜನರ ಸಮಸ್ಯೆಗಳ ಬಗ್ಗೆ ಗಮನ ಕೇಂದ್ರೀಕರಿಸಿ, ಯಾವುದೇ ಕಾರಣಕ್ಕೂ ಬಿಜೆಪಿ ತೋಡುವ ಖೆಡ್ಡಾಕ್ಕೆ ಬೀಳಬೇಡಿ ಎಂದು ಪಕ್ಷದ ಮಾಜಿ ಅಧ್ಯಕ್ಷ, ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಕಿವಿಮಾತು ಹೇಳಿದರು. ಡಿಎಂಕೆಯ ಇಬ್ಬರು ನಾಯಕರು ಸನಾತನ ಧರ್ಮ ಕುರಿತು ನೀಡಿದ ಹೇಳಿಕೆ ಬಳಸಿಕೊಂಡು ಇಂಡಿಯಾ ಕೂಟದ ವಿರುದ್ಧ ಬಿಜೆಪಿ ಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಎಚ್ಚರಿಕೆಯ ಈ ಸಲಹೆ ನೀಡಿದ್ದಾರೆ.
ತೆಲಂಗಾಣ: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಆರು ಗ್ಯಾರಂಟಿಗಳನ್ನು ಘೋಷಿಸಿದೆ. ತುಕ್ಕುಗುಡದಲ್ಲಿ ಭಾನುವಾರ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ರ್ಯಾಲಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಮಹಾಲಕ್ಷ್ಮಿ ಯೋಜನೆಯಡಿ ತೆಲಂಗಾಣದಲ್ಲಿ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಆರ್ಥಿಕ ನೆರವು, 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, ರಾಜ್ಯಾದ್ಯಂತ ಟಿಎಸ್​ಆರ್​ಸಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುವುದು. ತೆಲಂಗಾಣದ ಜನತೆಗೆ 6 ಗ್ಯಾರಂಟಿ ಘೊಷಿಸುತ್ತಿದ್ದೇವೆ. ಇವುಗಳಲ್ಲಿ ಪ್ರತಿಯೊಂದನ್ನು ಈಡೇರಿಸಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ದೇಶದ ಜನ ಒಂದು ಪರ್ಯಾಯ ಕ್ಕಾಗಿ ಎದುರು ನೋಡುತ್ತಿದ್ದಾರೆ. ಕರ್ನಾಟಕ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವೇ ಇದಕ್ಕೆ ಸಾಕ್ಷಿ ಎಂದು ಅಭಿಪ್ರಾಯಪಟ್ಟ ಖರ್ಗೆ, ಸಾಂಸ್ಥಿಕ ಒಗ್ಗಟ್ಟಿನ ಅಗತ್ಯವನ್ನು ಒತ್ತಿ ಹೇಳಿದರು. ಶಿಸ್ತಿನ ಮೂಲಕ ವಿರೋಧಿಗಳನ್ನು ಕಾಂಗ್ರೆಸ್ ಸೋಲಿಸಬಹುದು ಎಂಬುದನ್ನು ಕರ್ನಾಟಕದ ಅನುಭವ ತೋರಿಸಿಕೊಟ್ಟಿದೆ ಎಂದರು. ನಮ್ಮ ಮುಂದಿರುವ ಸವಾಲುಗಳು ಕೇವಲ ಕಾಂಗ್ರೆಸ್ ಪಕ್ಷದ ಸವಾಲುಗಳಲ್ಲ. ಅವು ಭಾರತೀಯ ಪ್ರಜಾಪ್ರಭುತ್ವದ ಉಳಿವು ಮತ್ತು ಭಾರತದ ಸಂವಿಧಾನ ರಕ್ಷಣೆಗೆ ಸಂಬಂಧಿಸಿದವು ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.
ಪ್ರತಿಪಕ್ಷಗಳ ಕೂಟವಾದ ಇಂಡಿಯಾ ಬಲಗೊಳ್ಳುತ್ತಾ ಮುಂದá-ವರಿಯುತ್ತಿರುವುದನ್ನು ಸಿಡಬ್ಲ್ಯುಸಿ ಗೊತ್ತುವಳಿಯಲ್ಲಿ ಶ್ಲಾಘಿಸಲಾಗಿದೆ. ಇಂಡಿಯಾ ಕೂಟದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಈಗಾಗಲೇ ಧೃತಿಗೆಟ್ಟಿವೆ ಎಂದು ಗೊತ್ತುವಳಿ ಅಭಿಪ್ರಾಯಪಟ್ಟಿದೆ. ಮಣಿಪುರದಲ್ಲಿ ಸಾಂವಿಧಾನಿಕ ಯಂತ್ರ ಸಂಪೂರ್ಣವಾಗಿ ಕುಸಿದು, ಹಿಂಸಾಚಾರ ಮುಂದುವರಿದಿರುವುದಕ್ಕೆ ಸಭೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ಬೀರೇನ್ ಸಿಂಗ್ ಅವರ ಹಠಮಾರಿತನದಿಂದ ಭದ್ರತಾ ಪಡೆಗಳು ಮತ್ತು ನಾಗರಿಕರು ಹಾಗೂ ಸೇನೆ/ಅಸ್ಸಾಂ ರೈಫಲ್ಸ್ ಮತ್ತು ರಾಜ್ಯ ಪೊಲೀಸರ ನಡುವೆ ಸಂಘರ್ಷಗಳು ನಡೆಯುವಂಥ ಪರಿಸ್ಥಿತಿ ಉದ್ಭವಿಸಿದೆ ಎಂದು ಕಾಂಗ್ರೆಸ್ ನಿರ್ಣಯ ಅಭಿಪ್ರಾಯಪಟ್ಟಿದೆ. ಗೌತಮ್ ಅದಾನಿ ಉದ್ಯಮ ಸಮೂಹದ ವಿರುದ್ಧದ ಅವ್ಯವಹಾರಗಳ ಕುರಿತು ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ ರಚಿಸಬೇಕೆಂಬ ಬೇಡಿಕೆಯನ್ನು ಕಾಂಗ್ರೆಸ್ ಪುನರುಚ್ಚರಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 5 =
Remember me
