ನವದೆಹಲಿ:ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಪಾತ್ರವನ್ನು ವಹಿಸುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಅಂಗೀಕರಿಸಿದೆ.
ಇದನ್ನೂ ಓದಿ:ಜನಾದೇಶ ಕೊಟ್ಟ ತೀರ್ಪನ್ನು ಗೌರವಿಸುತ್ತೇವೆ: ನವೀನ್ ಪಟ್ನಾಯಕ್​
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ರಾಹುಲ್ ಗಾಂಧಿ ಅವರಿಗೆ ಸಿಡಬ್ಲ್ಯುಸಿ ಸರ್ವಾನುಮತದಿಂದ ವಿನಂತಿಸಿದೆ. ಸಂಸತ್ತಿನ ಒಳಗೆ ಈ ಅಭಿಯಾನವನ್ನು ಮುನ್ನಡೆಸಲು ರಾಹುಲ್ ಗಾಂಧಿ ಅವರು ಅತ್ಯುತ್ತಮ ವ್ಯಕ್ತಿ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.
ನಮ್ಮ ನಾಯಕ ರಾಹುಲ್ ಗಾಂಧಿ ಮತ್ತು ಕಾರ್ಯಕರ್ತರು ಅಚಲವಾದ ಹೋರಾಟದಿಂದ ಕಾಂಗ್ರೆಸ್ ಮತ್ತೆ ಪುನಶ್ಚೇತನ ಆರಂಭವಾಗಿದೆ ಎಂದು ವೇಣುಗೋಪಾಲ್ ಹೇಳಿದರು. ಸಿಡಬ್ಲ್ಯುಸಿಯಲ್ಲಿನ ವಾತಾವರಣವು ನಾಲ್ಕು ತಿಂಗಳ ಹಿಂದೆ ಇದ್ದದ್ದಕ್ಕಿಂತ ಸಂಪೂರ್ಣವಾಗಿ ಭಿನ್ನವಾಗಿದೆ ಎಂದು ಅವರು ಹೇಳಿದರು.
CWC ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರಮೋದ್ ತಿವಾರಿ, “ಖಂಡಿತವಾಗಿಯೂ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಬೇಕು. ಇದು ನಮ್ಮ ಕಾರ್ಯಕಾರಿ ಸಮಿತಿಯ ವಿನಂತಿಯಾಗಿತ್ತು ಎಂದು ಹೇಳಿದರು.
ಎನ್‌ಡಿಎ ಅಭಿವೃದ್ಧಿಯ ಧ್ಯೇಯ ಹೊಂದಿರುವ ಸರ್ಕಾರವನ್ನು ರಚಿಸಲಿದೆ: ಮೋದಿ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಟ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:one × five =
Remember me
