Weather News Today : ದೇಶಾದ್ಯಂತ ಇಂದು ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ತೆಲಂಗಾಣ, ಛತ್ತೀಸ್‌ಗಢ ಮತ್ತು ಒಡಿಶಾದ ಕೆಲವು ಭಾಗಗಳು ಮತ್ತು ಮಹಾರಾಷ್ಟ್ರದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕಳೆದ 24 ಗಂಟೆಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ಈಶಾನ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ.
ಬಿಹಾರ, ಒಡಿಶಾ ಮತ್ತು ಜಾರ್ಖಂಡ್‌ನ ಕೆಲವು ಪ್ರದೇಶಗಳಲ್ಲಿ ಲಘು ಮಳೆಯಾಗಲಿದೆ. ಈ ಕಾರಣದಿಂದಾಗಿ, ವಾಯುವ್ಯ ಮತ್ತು ಮಧ್ಯ ಭಾರತದಾದ್ಯಂತ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಇಳಿಕೆ ದಾಖಲಾಗಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದೇ ಸಮಯದಲ್ಲಿ, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದಲ್ಲೂ ಮಳೆಯಾಗಲಿದೆ.
ಬೆಂಗಳೂರಿನ ಜನತೆಗೆ ನಿನ್ನೆ ರಾತ್ರಿ ದಿಢೀರ್ ಧಾರಾಕಾರ ಮಳೆ ಸುರಿದಿದ್ದರಿಂದ ಕೆಲವು ಕಡೆಗಳಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಜಲಾವೃತಗೊಂಡ ಬೀದಿಗಳ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
ಅಕ್ಟೋಬರ್ 9 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಭಾನುವಾರವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಲ್ಲಿ ಚದುರಿದಂತೆ ಉತ್ತಮ ಮಳೆಯಾಗುತ್ತಿದೆ. ಸುಬ್ರಹ್ಮಣ್ಯ, ಕಾರ್ಕಳ, ಧರ್ಮಸ್ಥಳ, ಸೋಮವಾರಪೇಟೆ, ಮಡಿಕೇರಿ, ಮೂಡಬಿದ್ರಿ, ಹೊರನಾಡು, ಕೊಪ್ಪ, ಶೃಂಗೇರಿ, ಕುರಿಂಜಾಲ ಬೆಟ್ಟದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ವರದಿಯಾಗಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:11 + 12 =
Remember me
