ಚೆನ್ನೈ:ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮೈಚಾಂಗ್ ಚಂಡಮಾರುತ ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿಗೆ ಸೋಮವಾರ ರಾತ್ರಿಯೇ ಅಪ್ಪಳಿಸಿದ್ದು, ಚೆನ್ನೈನಲ್ಲಿ ಭಾರೀ ಮಳೆ ಸುರಿಯಿತು. ಇದರ ಪರಿಣಾಮ ಚೆನ್ನೈನ ವಿಮಾನ ನಿಲ್ದಾಣ, ಮೆಟ್ರೋ ನಿಲ್ದಾಣಗಳು ಸೇರಿ ಬಹುತೇಕ ಬಡಾವಣೆಗಳು ಜಲಾವೃತವಾಗಿವೆ. ಮಳೆ ಸಂಬಂಧಿತ ಘಟನೆಗಳಿಂದ ವಿವಿಧೆಡೆ ಏಳು ಜನ ಮೃತಪಟ್ಟಿದ್ದಾರೆ.
ಇದನ್ನೂ ಓದಿ:‘ಬಿಜೆಪಿ ನನ್ನ ಮಾತನ್ನು ತಿರುಚಿ, ದೊಡ್ಡದು ಮಾಡಿದೆ’: ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆ ಸಮರ್ಥನೆಗೆ ಮುಂದಾದ ಉದಯನಿಧಿ ಸ್ಟಾಲಿನ್ಮೈಚಾಂಗ್ ಬಲವಾದ ಗಾಳಿ ಜತೆಗೆ ಬಿರುಸಿನ ಭಾರಿ ಮಳೆ ಸುರಿಸುತ್ತಿದೆ. ಚೆನ್ನೈ ನಗರದಲ್ಲಿ ಮಾತ್ರ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ ಐದು ಜನರು ಮೃತಪಟ್ಟಿದ್ದಾರೆ. ವಿಮಾನ ನಿಲ್ದಾಣದ ರನ್‌ವೇ ಜಲಾವೃತಗೊಂಡಿದ್ದರಿಂದ ವಿಮಾನಗಳ ಕಾರ್ಯಾಚರಣೆ ಮೇಲೆ ಪರಿಣಾಮ ಬೀರಿವೆ, ಹಲವು ವಿಮಾನಗಳನ್ನು ರದ್ದುಗೊಳಿಸಲಾಗಿದ್ದು, ಬೆಂಗಳೂರಿನಿಂದ ಕಾರ್ಯಾಚರಣೆಗೊಳ್ಳುವಂತೆ ಮಾಡಲಾಗಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾತ್ರಿ 11 ಗಂಟೆಯವರೆಗೆ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
ಜಲಾವೃತಗೊಂಡಿರುವ ಪ್ರದೇಶದಲ್ಲಿ ನೀರಿನ ಮಟ್ಟ ಹೆಚ್ಚಾದ ಕಾರಣ, ರಸ್ತೆಗಳಲ್ಲಿ ಮೊಸಳೆಗಳು ಕಾಣಿಸಿಕೊಂಡಿವೆ. ಚೆನ್ನೈನ ಹಲವು ಮೆಟ್ರೋ ನಿಲ್ದಾಣಗಳ ಬಳಿ ಜಲಾವೃತಗೊಂಡಿವೆ. ಸೇಂಟ್ ಥಾಮಸ್ ಮೆಟ್ರೋ ನಿಲ್ದಾಣದಲ್ಲಿ 4 ಅಡಿ ನೀರು ಸಂಗ್ರಹಗೊಂಡಿದ್ದು, ನಿಲ್ದಾಣದ ಪ್ರವೇಶವನ್ನು ಕಡಿತಗೊಳಿಸಲಾಗಿದೆ. ಆಲಂದೂರಿನಲ್ಲಿ ಮೆಟ್ರೋ ರೈಲು ಹತ್ತಲು ಪ್ರಯಾಣಿಕರಿಗೆ ಸೂಚಿಸಲಾಯಿತು.
ಭಾರೀ ಮಳೆಯಿಂದಾಗಿ ನಗರದಾದ್ಯಂತ ಐದು ಸಾವುಗಳಾಗಿರುವುದಾಗಿ ಚೆನ್ನೈ ಪೊಲೀಸರು ತಿಳಿಸಿದ್ದಾರೆ. ವೈದ್ಯನಾಥನ್ ಮೇಲ್ಸೇತುವೆ ಬಳಿಯ ಪ್ಲಾಟ್‌ಫಾರ್ಮ್‌ನಲ್ಲಿ 70 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಫೋರ್‌ಶೋರ್ ಎಸ್ಟೇಟ್ ಬಸ್ ಡಿಪೋದಲ್ಲಿ 60 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಮತ್ತೊಂದು ಶವ ಪತ್ತೆಯಾಗಿದೆ. ನಿರ್ಮಾಣ ಹಂತದ ಮನೆ ಕುಸಿದು ಇಬ್ಬರು ಛತ್ತೀಸ್​ಗಢ ಮೂಲದವರು ಮೃತಪಟ್ಟಿದ್ದಾರೆ.
ಇಂದೇ ರೇವಂತ್ ರೆಡ್ಡಿ ಸಿಎಂ ಆಗಿ ಪ್ರಮಾಣ ವಚನ – ತೆಲಂಗಾಣಕ್ಕೆ ಇಬ್ಬರು ಡಿಸಿಎಂಗಳು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 12 =
Remember me
