ನವದೆಹಲಿ:ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ನಿವಾರ್ ಚಂಡಮಾರುತ ಬುಧವಾರ ರಾತ್ರಿ 11ರ ಸುಮಾರಿಗೆ ಪುದುಚೆರಿ ಕಡಲ ತೀರಕ್ಕೆ ಅಪ್ಪಳಿಸಿದೆ. ತಮಿಳುನಾಡಿನ ಮಾಮಲ್ಲಪುರಂ ಹಾಗೂ ಪುದುಚೆರಿಯ ಕರೈಕಲ್ ಮಧ್ಯದ ಕಡಲ ತೀರದ ಮೂಲಕ ಭೂಪ್ರದೇಶವನ್ನು ಪ್ರವೇಶಿಸಿರುವ ಚಂಡಮಾರುತ ಪ್ರತಿ ತಾಸಿಗೆ 120 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವೇಗವಾಗಿ ಬೀಸುತ್ತಿರುವ ಗಾಳಿ ಹಾಗೂ ಭಾರಿ ಮಳೆಯಿಂದಾಗಿ ಅಪಾರ ಹಾನಿಯುಂಟಾಗುವ ಸಾಧ್ಯತೆ ಇದೆ. ತಮಿಳುನಾಡು ಮತ್ತು ಪುದುಚೆರಿಯಾದ್ಯಂತ ಗುರುವಾರವೂ ಮಳೆ ಮುಂದು ವರಿಯಲಿದೆ. ತಮಿಳುನಾಡಿನ 16 ಜಿಲ್ಲೆಗಳಲ್ಲಿ ಗುರುವಾರ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಪುದುಚೆರಿಯಲ್ಲೂ ರಜೆ ಪ್ರಕಟಿಸಲಾಗಿದೆ.
ತಮಿಳುನಾಡು ಮತ್ತು ಪುದುಚೆರಿಯ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಒಂದು ಮೀಟರ್​ಗಿಂತ ಎತ್ತರದ ಅಲೆಗಳಿಂದಾಗಿ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಚೆನ್ನೈ ಹೊರ ವಲಯದಲ್ಲಿರುವ ಚಂಬರಂಬಕ್ಕಂ ಬೃಹತ್ ಕೆರೆಯಿಂದ 1 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದಾಗಿ ಆಡ್ಯಾರ್ ನದಿಯಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, ನದಿ ತೀರದಲ್ಲಿ ವಾಸಿಸುತ್ತಿರುವ ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ತಕ್ಷಣ ರಕ್ಷಣಾ ಕ್ರಮ ಕೈಗೊಳ್ಳಲು ಅಧಿಕಾರಿಗಳು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆೆ.
ಬಸ್, ರೈಲು, ವಿಮಾನ ಸಂಚಾರ ಸ್ಥಗಿತ: ತಮಿಳುನಾಡಿನ 7 ಜಿಲ್ಲೆಗಳಲ್ಲಿ ಬುಧವಾರ ಮಧ್ಯಾಹ್ನದಿಂದ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ದಕ್ಷಿಣ ಮಧ್ಯ ರೈಲ್ವೆ ಮತ್ತು ದಕ್ಷಿಣ ರೈಲ್ವೆಯ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಜತೆಗೆ ಚೆನ್ನೈ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ 49ಕ್ಕೂ ಅಧಿಕ ವಿಮಾನಗಳ ಸಂಚಾರವನ್ನು ತಡೆಹಿಡಿಯಲಾಗಿದೆ. ಬುಧವಾರ ಸಂಜೆ 7ರಿಂದ ಗುರುವಾರ ಬೆಳಗ್ಗೆ 7ರವರೆಗೆ ಚೆನ್ನೈ ವಿಮಾನ ನಿಲ್ದಾಣ ಸ್ಥಗಿತವಾಗಲಿದೆ. ಅಗತ್ಯ ಸೇವೆಗಳಾದ ವೈದ್ಯಕೀಯ, ಇಂಧನ, ಔಷಧ ಅಂಗಡಿ, ಹಾಲಿನ ಬೂತ್​ಗಳನ್ನು ಹೊರತುಪಡಿಸಿ ಎಲ್ಲ ಅಂಗಡಿಗಳನ್ನು ಮುಚ್ಚಲಾಗಿದೆ.
1,200 ಸಿಬ್ಬಂದಿ ನಿಯೋಜನೆ
ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೆರಿಯಲ್ಲಿ ರಕ್ಷಣಾ ಕಾರ್ಯಕ್ಕೆ ಎನ್​ಡಿಆರ್​ಎಫ್​ನ 1,200 ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತಮಿಳುನಾಡಿನಲ್ಲಿ ಎನ್​ಡಿಆರ್​ಎಫ್​ನ 12 ತಂಡ, ಆಂಧ್ರಪ್ರದೇಶದಲ್ಲಿ 7 ತಂಡ ಹಾಗೂ ಪುದುಚೆರಿಯಲ್ಲಿ 3 ತಂಡಗಳನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ವಿವಿಧೆಡೆ 20 ತಂಡಗಳನ್ನು ಸನ್ನದ್ಧವಾಗಿರಿಸಲಾಗಿದೆ. ಇದರ ಜತೆಗೆ ಎಸ್​ಡಿಆರ್​ಎಫ್​ನ 700 ಸಿಬ್ಬಂದಿ ಹಾಗೂ 9,500 ಪೊಲೀಸ್ ಸಿಬ್ಬಂದಿ ಕೂಡ ರಕ್ಷಣಾ ಕಾರ್ಯಾಚರಣೆಗಳಿಗೆ ಸಿದ್ಧರಿದ್ದಾರೆ.
1.38 ಲಕ್ಷ ಮಂದಿ ಸ್ಥಳಾಂತರ
ಕಡಲತೀರ ಪ್ರದೇಶಗಳಲ್ಲಿ ವಾಸವಿದ್ದ ಸುಮಾರು 1.38 ಲಕ್ಷ ಜನರನ್ನು ವಿವಿಧೆಡೆ ಸ್ಥಾಪಿಸಲಾಗಿರುವ 1,694 ನಿರಾಶ್ರಿತರ ಶಿಬಿರಗಳಿಗೆ ರವಾನಿಸಲಾಗಿದೆ.
ರಾಜ್ಯದಲ್ಲೂ ಭಾರಿ ಮಳೆ
ನಿವಾರ್ ಚಂಡಮಾರುತ ಪರಿಣಾಮದಿಂದ ರಾಜ್ಯದಲ್ಲಿ ಗುರುವಾರದಿಂದ ಮೂರು ದಿನ ಭಾರಿ ಮಳೆಯಾಗಲಿದೆ. ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವೆಡೆ ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಚೆನ್ನೈ ಮತ್ತು ಬೆಂಗಳೂರು ನಡುವೆ ಸಂಚರಿಸುವ ಡಬ್ಬಲ್ ಡೆಕ್ಕರ್ ಮತ್ತು ಎಕ್ಸ್ ಪ್ರೆಸ್ ರೈಲುಗಳ ಸಂಚಾರವನ್ನು ನ. 26ರಂದು ರದ್ದು ಮಾಡಲಾಗಿದೆ ನೈಋತ್ಯ ರೈಲ್ವೆ ತಿಳಿಸಿದೆ. ಚಂಡಮಾರುತ ಸಂಬಂಧ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ರಕ್ಷಣೆಗೆ ನೌಕಾಪಡೆ ಸನ್ನದ್ಧ
ನಿವಾರ್ ಚಂಡಮಾರುತದ ಪ್ರತಿ ಚಲನೆಯನ್ನೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು, ಜನರ ರಕ್ಷಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ನೌಕಾಪಡೆ ತಿಳಿಸಿದೆ. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಪುದುಚೆರಿಯ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ನೌಕೆಗಳು, ಹೆಲಿಕಾಪ್ಟರ್​ಗಳು ಹಾಗೂ ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ ಎಂದು ನೌಕಾಪಡೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + thirteen =
Remember me
