ನವದೆಹಲಿ:ಭಾರತದ ಒಟ್ಟಾರೆ ಕರೊನಾ ಸೋಂಕಿತರ ಪೈಕಿ ಗರಿಷ್ಠ ಸೋಂಕಿತರನ್ನು ಹೊಂದಿರುವ ಗುಜರಾತ್​ ಮತ್ತು ಮಹಾರಾಷ್ಟ್ರ ರಾಜ್ಯಗಳು ನೈಸರ್ಗಿಕ ವಿಕೋಪಕ್ಕೂ ತುತ್ತಾಗುವುದು ಬಹುತೇಕ ನಿಶ್ಚಿತವಾಗಿದೆ.
ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ್​ನ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಸೋಮವಾರದಂದು ಅದು ಗರಿಷ್ಠ ಪ್ರಮಾಣಕ್ಕೆ ಕುಸಿಯುವ ಸಾಧ್ಯತೆ ಇದೆ. ಮರುದಿನ ಅದು ಚಂಡಮಾರುತವಾಗಿ ರೂಪಾಂತರಗೊಂಡು ಗುಜರಾತ್​ ಮತ್ತು ಮಹಾರಾಷ್ಟ್ರದ ಉತ್ತರ ಕರಾವಳಿ ಪ್ರದೇಶಕ್ಕೆ ಜೂನ್​ 3ರಂದು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಇದನ್ನೂ ಓದಿ:ಕರೊನಾದ ಮತ್ತೊಂದು ತಲೆನೋವು: ಲಕ್ಷಣಗಳೇ ಇಲ್ಲದ ಶೇ.28 ಮಂದಿಗೆ ಸೋಂಕು!
ಚಂಡಮಾರುತವು ಉತ್ತರ ದಿಕ್ಕಿನಲ್ಲಿ ಚಲಿಸುತ್ತಾ ಗುಜರಾತ್​ ಮತ್ತು ಮಹಾರಾಷ್ಟ್ರದ ಉತ್ತರ ಕರಾವಳಿ ಪ್ರದೇಶವನ್ನು ಜೂ.3ರ ಸಂಜೆ ತಲುಪಿ, ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಧಾನ ಮಹಾನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ತಿಳಿಸಿದ್ದಾರೆ.
ಮೇ 20ರಂದು ಅಂಫಾನ್​ ಚಂಡಮಾರುತ ಭಾರತದ ಪೂರ್ವ ಕರಾವಳಿ ಪ್ರದೇಶಗಳಾದ ಪಶ್ಚಿಮ ಬಂಗಾಳ ಮತ್ತು ಒಡಿಶಾಕ್ಕೆ ಅಪ್ಪಳಿಸಿತ್ತು. ಅಂದಾಜು 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಈಗ ಪಶ್ಚಿಮ ಕರಾವಳಿ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಲಿದೆ.
ಭಾರತದ ಪ್ರದೇಶ ಒಳಗೊಂಡ ವಿವಾದಾತ್ಮಕ ನಕ್ಷೆ ಸಂಸತ್​ನಲ್ಲಿ ಮಂಡನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
