ಭೋಪಾಲ್​:ಮಧ್ಯಪ್ರದೇಶದಲ್ಲಿ ಇತ್ತೀಚಿಗೆ ಬುಡಕಟ್ಟು ಸಮುದಾಯಕ್ಕೆ ಸೇರಿದ ವ್ಯಕ್ತಿ ಮೇಲೆ ಬಿಜೆಪಿ ನಾಯಕನೋರ್ವ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಘಟನೆಯೊಂದು ರೇವಾ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸೊಹಾಗೊ ಗ್ರಾಮದಲ್ಲಿ ಘಟನೆ ನಡೆದಿದ್ದು, ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯೋರ್ವ ಕಳ್ಳತನ ಮಾಡಿದ್ದಾನೆಂಬ ಶಂಕೆಯ ಮೇಲೆ ಆತನನ್ನು ಅಮಾನುಷವಾಗಿ ಥಳಿಸಿ ಚಪ್ಪಲಿ ಹಾರ ಹಾಕಿ ಗ್ರಾಮದ ಸುತ್ತ ಮೆರವಣಿಗೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
Locals beat a#Dalityouth with sticks, garland him with shoes and parade him in village in#Rewa#MadhyaPradeshpic.twitter.com/Z60JQaoQHS
ಇದನ್ನೂ ಓದಿ:ಕುಮಾರಸ್ವಾಮಿ ಪೆನ್​ಡ್ರೈವ್​ ಹೆಸರಿನಲ್ಲಿ ದಂಧೆ ಮಾಡುತ್ತಿದ್ದಾರೆ: ಕೆ.ಎನ್. ರಾಜಣ್ಣ
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ದೇಶ್​ಪಾಲ್​ ಸಿಂಗ್​ ಹಾಗೂ ಅವರ ಮಗ ಹರಿ ಓಂ ಸಿಂಗ್ ಇಂದ್ರಜಿತ್​ ಮಾಂಝಿ ಕಳ್ಳತನ ಮಾಡಿದ್ದಾರೆಂದು ಶಂಕಿಸಿ ಆತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡುವ ಮೂಲಕ ಅವಮಾನಿಸಿದ್ದಾರೆ. ಬಳಿಕ ಈ ವಿಚಾರ ಪೊಲೀಸರಿಗೆ ತಿಳಿಸಿದ್ದರೆ ಇಡೀ ಕುಟುಂಬವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಗಂಭೀರವಾಗಿ ಗಾಯಗೊಮಡಿದ್ದ ಇಂದ್ರಜಿತ್ ಆಸ್ಪತ್ರೆಗೆ ದಾಖಲಾಗಿದ್ದು​ ಈ ಕುರಿತು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ಒಂದನ್ನು ರಚಿಸಲಾಗಿದೆ. ಈ ರೀತಿಯ ಪ್ರಕರಣಗಳು ಬೆಳಕಿಗೆ ಬಂದಾಗ ಆರೋಪಿಗಳನ್ನು ರಕ್ಷಿಸುವ ಮಾತಿಲ್ಲ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 5 =
Remember me
