ಲಖನೌ:ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿ ದೌರ್ಜನ್ಯ ಎಸಗಿದ ಘಟನೆ ಮಾಸುವ ಮುನ್ನವೇ ಅದೇ ರಿತಿಯ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಲಾಗಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿ ಆರೋಪಿಯ ಬಂಧವೂ ಆಗಿದೆ. ಇದೀಗ ಉತ್ತರ ಪ್ರದೇಶದಲ್ಲಿ ದಲಿತ ವ್ಯಕ್ತಿಯೊಬ್ಬನಿಂದ ಕಾಲನ್ನು ಬಲವಂತವಾಗಿ ನೆಕ್ಕಿಸಿರುವ ವಿಡಿಯೋ ವೈರಲ್​ ಆಗಿದೆ.
ಮಂಚದ ಮೇಲೆ ದುಷ್ಟ ವ್ಯಕ್ತಿಯೊಬ್ಬ ಕುಳಿತಿರುತ್ತಾನೆ. ಆತನ ಮುಂದೆ ನಿಂತಿರುವ ಸಂತ್ರಸ್ತ ತನ್ನ ಮಂಡಿಯೂರಿ ಕೆಳಗೆ ಬಾಗಿ ಚಪ್ಪಲಿ ಸಹಿತ ಆ ವ್ಯಕ್ತಿಯ ಕಾಲು ನೆಕ್ಕುವ ದೃಶ್ಯ ವಿಡಿಯೋದಲ್ಲಿದೆ. ಬಳಿಕ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವ ದೃಶ್ಯವೂ ಇದೆ.
ಇದನ್ನೂ ಓದಿ:ಶಕ್ತಿಕೇಂದ್ರಗಳ ಶೀತಲಸಮರ, ಬಿಜೆಪಿಗೆ ಮುಜುಗರ: ಅಧಿವೇಶನಕ್ಕೆ ವಿಪಕ್ಷ ನಾಯಕನ ಆಯ್ಕೆ ಕ್ಷೀಣ ವೀಕ್ಷಕರಿಂದಲೂ ನೀಗದ ಸಮಸ್ಯೆ
ಸಂತ್ರಸ್ತನನ್ನು ರಾಜೇಂದ್ರ ಎಂದು ಗುರುತಿಸಲಾಗಿದೆ. ಕಾಲು ನೆಕ್ಕುವಂತೆ ಮಾಡಿದ್ದಲ್ಲದೆ, ಬಸ್ಕಿ ಹೊಡೆಸಿ, ಹಲ್ಲೆ ಮಾಡಿ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ಈ ವಾರದ ಆರಂಭದಲ್ಲಿ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಸೊನಭದ್ರ ಜಿಲ್ಲೆಯಲ್ಲಿ ನಡೆದಿದೆ.
ವಿಡಿಯೋ ವೈರಲ್​ ಆದ ಬೆನ್ನಲ್ಲೇ ಉತ್ತರ ಪ್ರದೇಶ ಪೊಲೀಸರು 1989ರ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಕಾಯ್ದೆ (ದೌರ್ಜನ್ಯ ತಡೆ ಕಾಯ್ದೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯನ್ನು ತೇಜ್​ಬಲಿ ಸಿಂಗ್​ ಎಂದು ಗುರುತಿಸಲಾಗಿದೆ. ಈತ ಇಂಧನ ಇಲಾಖೆಯ ಲೈನ್​ಮ್ಯಾನ್​ ಎಂದು ತಿಳಿದುಬಂದಿದೆ. ಸಂತ್ರಸ್ತನ ಚಿಕ್ಕಪ್ಪನ ಮನೆಯಲ್ಲಿ ವಿದ್ಯುತ್ ಸಮಸ್ಯೆ ಇತ್ತು. ಈ ವೇಳೆ ಲೈನ್‌ಮ್ಯಾನ್ ಸ್ಥಳಕ್ಕಾಗಮಿಸಿದ್ದ. ಯಾವುದೋ ವಿಚಾರವಾಗಿ ಆಕ್ರೋಶಗೊಂಡ ತೇಜ್​ಬಲಿ ಸಿಂಗ್​, ಸಂತ್ರಸ್ತನನ್ನು ಥಳಿಸಲು ಪ್ರಾರಂಭಿಸಿದನು ಮತ್ತು ಚಪ್ಪಲಿ ನೆಕ್ಕುವಂತೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಪೆನ್‌ಡ್ರೈವ್ ಇಟ್ಟುಕೊಂಡು ಹೆಸರಿಸುವುದು ಶೋಭೆಯಲ್ಲ: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಚ್.ವಿಶ್ವನಾಥ್ ವಾಗ್ದಾಳಿ
ಮತ್ತೊಂದು ವೀಡಿಯೊದಲ್ಲಿ, ಲೈನ್‌ಮ್ಯಾನ್, ಸಂತ್ರಸ್ತ ರಾಜೇಂದ್ರನನ್ನು ನೆಲಕ್ಕೆ ಬೀಳಿಸಿ ಮನಬಂದಂತೆ ಥಳಿಸುತ್ತಾನೆ. ಅಲ್ಲದೆ, ಪದೇಪದೆ ಕಪಾಳಮೋಕ್ಷ ಮಾಡುತ್ತಾನೆ. ಅಶ್ಲೀಲ ಪದಗಳಿಂದ ನಿಂದಿಸುತ್ತಾನೆ. ಮತ್ತೆ ಈ ಪ್ರದೇಶಕ್ಕೆ ಭೇಟಿ ನೀಡದಂತೆ ಬೆದರಿಕೆ ಹಾಕುತ್ತಾನೆ. ಅಂದರೆ, ಸಂತ್ರಸ್ತ ರಾಜೇಂದ್ರ ಅಂಕಲ್​ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.(ಏಜೆನ್ಸೀಸ್​)
ಕಾಮಕುಮಾರ ಸ್ವಾಮೀಜಿಯ ಭೀಕರ ಕೊಲೆ; ತಲೆ ಇಬ್ಭಾಗ, ಕೈ-ಕಾಲುಗಳೂ ಕಟ್, ಶವ 9 ತುಂಡು!

VIDEO| ಕಳ್ಳತನ ಶಂಕೆ; ದಲಿತ ವ್ಯಕ್ತಿಯನ್ನು ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ

ನಾಪತ್ತೆಯಾಗಿದ್ದ ಸ್ವಾಮೀಜಿಯ ದೇಹ ಪೀಸ್ ​ಪೀಸ್​; 400 ಅಡಿ ಆಳದ ಬೋರ್​ವೆಲ್​ನಲ್ಲಿ ಶವದ ತುಂಡುಗಳು ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 1 =
Remember me
