ಖಾನ್‌ಪುರ:ಹೋಟೆಲ್ ಮಾಲೀಕ ಹಾಗೂ ಸಿಬ್ಬಂದಿ ಸೇರಿ ದಲಿತ ವ್ಯಕ್ತಿಯೊಬ್ಬನನ್ನು ಅಮಾನುಷವಾಗಿ ಥಳಿಸಿರುವ ಘಟನೆ ಗುಜರಾತ್​ನ ಖಾನ್​ಪುರದಲ್ಲಿ ನಡೆದಿದೆ.
ಇದನ್ನೂ ಓದಿ:32 ವರ್ಷಗಳ ಬಳಿಕ ಮತ್ತೆ ಒಂದಾದ ರಜನಿಕಾಂತ್​-ಅಮಿತಾಭ್​ ಬಚ್ಚನ್​; ಲೈಕಾ ಪ್ರೊಡಕ್ಷನ್ಸ್​ ನಿರ್ಮಾಣದಲ್ಲಿ ತಲೈವಾ 170ನೇ ಸಿನಿಮಾಸಂತ್ರಸ್ತನನ್ನು ಜಯಂತಿ ಚೌಹಾಣ್ ಅಲಿಯಾಸ್ ರಾಜು ವಂಕರ್(45) ಎಂದು ಗುರುತಿಸಲಾಗಿದ್ದು, ಆಹಾರದ ವಿಚಾರವಾಗಿ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.
ಚೌಹಾಣ್ ಹೊಟ್ಟೆ ನೋವಿನ ಬಗ್ಗೆ ದೂರು ನೀಡಿ ಲುನವಾಡ ಆಸ್ಪತ್ರೆಗೆ ಸೇರಿದ್ದರು. ಕೊನೆಗೆ ಹೆಚ್ಚಿನ ಚಿಕಿತ್ಸೆಗಾಗಿ ವಡೋದರಕ್ಕೆ ಆಸ್ಪತ್ರೆಗೆ ದಾಖಲಿಸಿದ ವೇಳೆ ಆತನ ಮೇಲೆ ಹಲ್ಲೆ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ವಿಷಯವನ್ನು ತಿಳಿದ ಸಂತ್ರಸ್ತನ ಕುಟುಂಬ ಹಾಗೂ ಆತನ ಸಮುದಾಯದವರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು, ಆರೋಪಿಗಳಿಬ್ಬರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಹೋಟೆಲ್​ ಮಾಲೀಕ ಅಮಿತ್​ ಮತ್ತು ಸಿಬ್ಬಂದಿ ವಿರುದ್ಧ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಈ ಹಿಂದೆ ಜೂನ್ 4ರಂದು ಗುಜರಾತ್‌ನ ಪಟಾನ್ ಜಿಲ್ಲೆಯ ಗ್ರಾಮಸ್ಥರು ಶಾಲೆಯ ಆಟದ ಮೈದಾನದಲ್ಲಿ ನಡೆದ ಪಂದ್ಯದ ವೇಳೆ ಕ್ರಿಕೆಟ್ ಚೆಂಡನ್ನು ಎತ್ತಿಕೊಂಡ ಕಾರಣ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಹೆಬ್ಬೆರಳು ಕತ್ತರಿಸಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eight =
Remember me
