ಅಮರಾವತಿ:ಹುಡುಗಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವಕರ ಗುಂಪೊಂದು ಎಸ್​ಟಿ ಸಮುದಾಯಕ್ಕೆ ಸೇರಿದ ಯುವಕನನ್ನು ಮನಬಂದಂತೆ ಥಳಿಸಿ ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಓಂಗೋಲ್​ನಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಹಲ್ಲೆಗೊಳಗಾದವರನ್ನು ಮೋಟಾ ನವೀನ್ ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪ್ರಕಾಶಂ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾ ಗಾರ್ಗ್​ ರಾಮಾಂಜನೇಯುಲು ಹಾಗೂ ಹಲ್ಲೆಗೊಳಗಾದ ನವೀನ್​ ಇಬ್ಬರು ಸ್ನೇಹಿತರಾಗಿದ್ದು, ಅಪ್ರಾಪ್ತ ವಯಸ್ಕಳನ್ನು ಪ್ರೀತಿಸುವ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ. ಬಳಿಕ ನವೀನ್​ ಅಪ್ರಾಪ್ತ ವಯಸ್ಕಲೊಂದಿಗೆ ಓಡಿ ಹೋಗಿದ್ದ.
ಇದನ್ನೂ ಓದಿ:ವ್ಹೀಲಿಂಗ್ ಸ್ಟಂಟ್ ಮಾಡುವವರ ಚಾಲನಾ ಪರವಾನಗಿ ರದ್ದು: ಅಲೋಕ್​ ಕುಮಾರ್​
ಈ ಸಂಬಂಧ ನವೀನ್​ ಜಾಮೀನಿನ ಮೇಲೆ ಹೊರ ಬಂದಿದ್ದ. ಬಳಿಕ ಅಪ್ರಾಪ್ತ ವಯಸ್ಕಳೊಂದಿಗಿನ ಸಂಬಂಧವನ್ನು ಮುಂದುವರೆಸಿದ್ದ. ಇದಿರಂದ ಕುಪಿತಗೊಂಡಿದ್ದ ರಾಮಾಂಜನೇಯುಲು ನವೀನ್​ ಜೊತೆ ಜಗಳವಾಡಿ ಇಬ್ಬರು ಮಾತನಾಡುವುದನ್ನು ಬಿಟ್ಟಿದ್ದರು. ಕೆಲ ದಿನಗಳು ಕಳೆದ ನಂತರ ರಾಮಾಂಜನೇಯುಲು ನವೀನ್​ಗೆ ಕರೆ ಮಾಡಿ ಮಾತನಾಡಬೇಕು ಎಂದು ಕರೆಸಿಕೊಂಡಿದ್ದಾನೆ.
ಮಾತನಾಡುವ ನೆಪದಲ್ಲಿ ಆರೋಪಿ ಸಂತ್ರಸ್ತನನ್ನು ಕರೆಸಿಕೊಂಡಿದ್ದು, ಇಬ್ಬರು ಚೆನ್ನಾಗಿ ಕುಡಿದಿದ್ದಾರೆ. ಇದಾದ ಕೆಲ ಹೊತ್ತಿನ ಬಳಿಕ ರಾಮಾಂಜನೇಯುಲು ತನ್ನ ಸ್ನೇಹಿತರ ಜತೆಗೂಡಿ ಪಾನಮತ್ತನಾಗಿದ್ದ ನವೀನ್​ ಮೇಲೆ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿ ಪರಾರಿಯಾಗಿದ್ದಾರೆ.
ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ತಲೆಮಾರಿಸಿಕೊಂಡಿದ್ದಾರೆ. ಈ ಸಂಬಂಧ ವಿಶೇಷ ತಂಡ ಒಂದನ್ನು ರಚಿಸಲಾಗಿದೆ ಎಂದು ಪ್ರಕಾಶಂ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾ ಗಾರ್ಗ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + one =
Remember me
