ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಸುದ್ದಿ ವಾಹಿನಿಯಲ್ಲಿ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕ ಕುಣಿದು ಕುಪ್ಪಳಿಸಿದ ವಿಡಿಯೋ ಬಾರಿ ವೈರಲ್ ಆಗಿದೆ.
ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ರಾಜು ಬಿಸ್ತಾಗೆ ಟಿಕೆಟ್ ಘೋಷಣೆ ಮಾಡಿದೆ. ಈ ಸುದ್ದಿ ಘೋಷಣೆಯಾಗತ್ತಿದ್ದಂತೆ ಸುದ್ದಿ ವಾಹನಿಯಲ್ಲಿ ವೀಕ್ಷಿಸುತ್ತಿದ್ದ ಡಾರ್ಜಲಿಂಗ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನೀರಜ್ ಜಿಂಬಾ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ.
Gorkha National Liberation Front (GNLF) ನ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಜಿಂಬಾ ಅವರು ಬಿಸ್ತಾ ಅವರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ. ಇಬ್ಬರು ಕೂಡಾ ಆಪ್ತರಾಗಿದ್ದಾರೆ. ಬಿಸ್ತಾ ಅವರಿಗೆ ಬಿಜೆಪಿ ಟಿಕೆಟ್ ನೀಡದಿದ್ದರೆ ಡಾರ್ಜಿಲಿಂಗ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಜಿಂಬಾ ಈ ಹಿಂದೆ ಬೆದರಿಕೆ ಹಾಕಿದ್ದರು ಎಂಬುದು ಗಮನಿಸಬೇಕಾದ ಸಂಗತಿ.
First Reaction of@NeerajZimbaafter the announcement of@RajuBistaBJPnamepic.twitter.com/jbVt7UFWx9
— Jyoti Mukhia (@jytmkh)March 24, 2024

ಭಾನುವಾರ ಬಿಜೆಪಿ ಲೋಕಸಭಾ ಚುನಾವಣೆಯ 5ನೇ ಪಟ್ಟಿ ಬಿಡುಗಡೆ ಮಾಡಿದೆ. 111 ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್‌ಗೂ ಟಿಕೆಟ್ ನೀಡಲಾಗಿತ್ತು. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾಗೆ ಬಿಜೆಪಿ ಟಿಕೆಟ್ ನೀಡಿದೆ. ಇನ್ನು ಉತ್ತರ ಪ್ರದೇಶದ ಮೀರತ್ ಕ್ಷೇತ್ರದಿಂದ ರಾಮಾಯಣ ಸೀರಿಯಲ್ ನಟ ಅರುಣ್ ಗೋವಿಲ್‌ಗೆ ಟಿಕೆಟ್ ನೀಡಲಾಗಿದೆ.
ಬೇಸಿಗೆಯಲ್ಲಿ ಪ್ರತಿನಿತ್ಯ ರಾಗಿ ಅಂಬಲಿ ಸೇವನೆ ಮಾಡುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗೆ ತಿಳಿದಿರಲೇ ಬೇಕು..

ನಾನಿನ್ನೂ ಬದುಕಿದ್ದೇನೆ, ಯಾಕೆ ವಿಲನ್‌ ರೀತಿ ನೋಡ್ತಿರಾ? ತನ್ನ ಸ್ಥಿತಿ ನೆನೆದು ಕಣ್ಣೀರಿಟ್ಟ ಆಶಿಶ್ ವಿದ್ಯಾರ್ಥಿ

ಡಿಜಿಟಲ್ ಭಿಕ್ಷುಕ; ಅಮ್ಮಾ…ತಾಯೇ QR ಕೋಡ್ ಸ್ಕ್ಯಾನ್ ಮಾಡಿ ಭಿಕ್ಷೆ ಹಾಕಮ್ಮಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 13 =
Remember me
