ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಯಾವಾಗ ಬಿಡುಗಡೆಯಾಗುತ್ತಾರೆ ಅಂತಾ ಅಭಿಮಾನಿಗಳು ಕಾಯುತ್ತಿದ್ದಾರೆ. ಜುಲೈ 18ರಂದು ನ್ಯಾಯಾಂಗ ಬಂಧನ ಅವಧಿ ಮುಗಿಯಲಿದ್ದು, ಆರೋಪಿಗಳನ್ನು ಮತ್ತೊಮ್ಮೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಜಾಮೀನು ಸಿಗುತ್ತಾ ಅಥವಾ ಮತ್ತೆ ಜೈಲು ಪಾಲಾಗುತ್ತಾರಾ ಕಾದು ನೋಡಬೇಕಿದೆ.
ಜೈಲಿನ ಊಟ ಸೇರಿದೆ, ತೂಕ ಕಳೆದುಕೊಂಡು ದರ್ಶನ್ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಇದೀಗ ನಟ ದರ್ಶನ್ ಧರಿಸಿದ್ದ ವಿಗ್ ತೆಗೆದು ತಲೆ ಬೋಳಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.
ಊಟ ಸೇರದೇ ನಿದ್ದೆ ಬಾರದೇ ಚಿಂತೆಯಲ್ಲೇ ಮುಳುಗಿರುವ ದರ್ಶನ್ ದೇಹದ ತೂಕ ಇಳಿದಿದೆ, ಊಟ ಜೀರ್ಣವಾಗದೇ ವಾಂತಿ, ಭೇದಿ ಆಗಿತ್ತು ಎಂದು ಜೈನಿನ ವೈದ್ಯರು ವರದಿ ನೀಡಿದ್ದರು.
ಜುಲೈ 10ರಂದು ನ್ಯಾ ಎಸ್ ಆರ್ ಕೃಷ್ಣಕಮಾರ್ ಪೀಠ ರಿಟ್ ಅರ್ಜಿ ವಿಚಾರಣೆ ನಡೆಸಿತು. ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿದೆ.
ದರ್ಶನ್ ತಲೆ ಕೂದಲು ಈ ಹಿಂದೆಯೇ ಸಾಕಷ್ಟು ಉದುರಿತ್ತು. ಆದ್ದರಿಂದ ಅವರು ಇತ್ತೀಚೆಗೆ ವಿಗ್​ ಧರಿಸುತ್ತಿದ್ದರು. ದ್ಯ ಜೈಲಿನಲ್ಲಿ ಅದನ್ನು ಮೆಂಟೇನ್ ಮಾಡುವುದು ಕಷ್ಟವಾಗುತ್ತಿತ್ತು. ಹಾಗಾಗಿ ತಲೆ ಕೂದಲನ್ನು ಬೋಳಿಸಿಕೊಂಡಿದ್ದಾರೆಂದು ವರದಿಯಾಗಿದೆ.
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಚಿತ್ರೀಕರಣ ಆರಂಭದಲ್ಲೇ ನಿಂತಿದೆ. ಡಿಸೆಂಬರ್‌ನಲ್ಲಿ ಸಿನಿಮಾ ಬಿಡುಗಡೆ ಪ್ರಯತ್ನಗಳು ನಡೀತಿತ್ತು. ಆದಷ್ಟು ಬೇಗ ದರ್ಶನ್ ಜೈಲಿನಿಂದ ಹೊರಬಂದು ಸಿನಿಮಾ ಶೂಟಿಂಗ್​ ಮುಂದುವರಿಯಲಿ ಎಂದು ಅಭಿಮಾನಿಗಳು ಪೂಜೆ ಪುನಸ್ಕಾರಗಳನ್ನ ಮಾಡುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 16 =
Remember me
