ಅಯೋಧ್ಯೆ:ಭವ್ಯ ರಾಮಮಂದಿರದಲ್ಲಿ ಬಹು ನಿರೀಕ್ಷಿತ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಮುಹೂರ್ತ ಕೂಡಿ ಬಂದಿದೆ. ಮುಂದಿನ ವರ್ಷ ಜನವರಿ 21, 22, ಅಥವಾ 23ರಂದು ಪ್ರತಿಷ್ಠಾಪನೆ ನೆರವೇರಿಸಲು ನಿರ್ಧರಿಸಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ಕಳುಹಿಸಲಾಗಿದ್ದು, ಅವರು ಪಾಲ್ಗೊಳ್ಳುವುದು ಬಹುತೇಕ ಖಚಿತವಾಗಿದೆ. ಆದರೆ ಮೂರು ದಿನಗಳ ಕಾರ್ಯಕ್ರಮಗಳಲ್ಲೂ ಅವರು ಭಾಗಿಯಾಗಲಿದ್ದಾರೆಯೇ ಎಂಬುದು ಇನ್ನೂ ದೃಡಪಟ್ಟಿಲ್ಲ. ಪ್ರಮುಖ ಸಾಧುಗಳು ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ಮುಖ್ಯ ಕಾರ್ಯಕ್ರಮವನ್ನು ರಾಜಕೀಯೇತರವಾಗಿ ಇರಿಸಲಾಗುವುದು. ವಿವಿಧ ರಾಜಕೀಯ ಪಕ್ಷಗಳ ಅತಿಥಿಗಳನ್ನು ಸಹ ಆಹ್ವಾನಿಸಲಾಗುವುದು. ಮೂರ್ತಿ ಪ್ರತಿಷ್ಠಾಪನೆಯ ಧಾರ್ವಿುಕ ಕಾರ್ಯಕ್ರಮದ ಸಂದರ್ಭದಲ್ಲಿ ವೇದಿಕೆ ಅಥವಾ ಸಾರ್ವಜನಿಕ ಸಭೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ
ಕೋವಿಡ್-19 ಮಾರ್ಗಸೂಚಿಗಳ ಕಾರಣ ದಿಂದಾಗಿ ದೇವಾಲಯದ ಭೂಮಿ ಪೂಜೆ ಕಾರ್ಯ ಕ್ರಮವನ್ನು 2020ರ ಆಗಸ್ಟ್ 5ರಂದು ಸೀಮಿತ ಪ್ರಮಾಣದಲ್ಲಿ ನಡೆಸಲಾಗಿತ್ತು. ಈಗ ರಾಮಲಲ್ಲಾ ಗರ್ಭಗುಡಿ ಪೂರ್ಣಗೊಳ್ಳುವ ಹಂತದಲ್ಲಿದೆ. ಜನವರಿ ತಿಂಗಳಲ್ಲಿ ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲಾಗುವುದು. ಇದಕ್ಕೆ ಭರದ ಸಿದ್ಧತೆ ಸಾಗುತ್ತಿದೆ ಎಂದು ದೇವಸ್ಥಾನದ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಹೇಳಿದ್ದಾರೆ.
25,000ಕ್ಕೂ ಅಧಿಕ ಹಿಂದು ಮುಖಂಡರು
ಸಮಾರಂಭಕ್ಕೆ 136 ಸನಾತನ ಸಂಪ್ರದಾಯಗಳ 25,000ಕ್ಕೂ ಹೆಚ್ಚು ಹಿಂದು ಧಾರ್ವಿುಕ ಮುಖಂಡರನ್ನು ಆಹ್ವಾನಿಸಲು ಟ್ರಸ್ಟ್ ಯೋಜಿಸಿದೆ. ಸಂತರ ಪಟ್ಟಿಯನ್ನು ದೇವಾಲಯದ ಟ್ರಸ್ಟ್ ಸಿದ್ಧಪಡಿಸುತ್ತಿದೆ. ಶೀಘ್ರದಲ್ಲೇ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಸಹಿಯೊಂದಿಗೆ ಆಹ್ವಾನ ಪತ್ರಿಕೆಯನ್ನು ಕಳುಹಿಸಲಾಗುವುದು ಎಂದು ಚಂಪತ್ ರಾಯ್ ತಿಳಿಸಿದ್ದಾರೆ. ಅಯೋಧ್ಯೆಯ ದೊಡ್ಡ ಮಠಗಳಲ್ಲಿ ಎಲ್ಲಾ ಪ್ರಮುಖ ಸಂತರಿಗೆ ಉಳಿದುಕೊಳ್ಳುವ ಅವಕಾಶ ಕಲ್ಪಿಸಲು ಟ್ರಸ್ಟ್ ಯೋಜಿಸಿದೆ. 25,000 ಸಂತರು 10,000 ವಿಶೇಷ ಅತಿಥಿಗಳು ಸಮಾರಂಭ ವೀಕ್ಷಣೆ ಮಾಡಲಿದ್ದಾರೆ.
ಇಡೀ ತಿಂಗಳು ಉಚಿತ ಆಹಾರ
ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರಿಗೆ ಸುಮಾರು ಒಂದು ತಿಂಗಳ ಕಾಲ ಉಚಿತ ಆಹಾರ ನೀಡಲು ಟ್ರಸ್ಟ್ ಮುಂದಾಗಿದೆ. ಟ್ರಸ್ಟ್ ವತಿಯಿಂದ ಇಡೀ ಜನವರಿ ತಿಂಗಳಲ್ಲಿ ಪ್ರತಿದಿನ ಒಂದು ಲಕ್ಷ ಜನರಿಗೆ ಆಹಾರವನ್ನು ನೀಡಲಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 5 =
Remember me
