ಕೊಚ್ಚಿ:ಬಹಳ ಮುದ್ದಿನಿಂದ ಸಾಕಿ ಸಲುಹಿದ್ದ ಮಗಳು ಅಪಘಾತದಲ್ಲಿ ದುರಂತ ಸಾವಿಗೀಡಾದ ಸುದ್ದಿಯನ್ನು ಕೇಳಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯ ಕೊತ್ತಮಂಗಲಂನಲ್ಲಿ ನಡೆದಿದೆ.
ಗಾಯತ್ರಿ (45) ಮೃತ ತಾಯಿ. ಈಕೆ ಕೊತ್ತಮಂಗಲಂ ನಿವಾಸಿ. ಈಕೆಯ ಮಗಳು ಸ್ನೇಹ (24) ಅಲುವಾದಲ್ಲಿರುವ ಯೂಸಿ ಕಾಲೇಜಿನಲ್ಲಿ ಎಂಬಿಯ ವಿದ್ಯಾರ್ಥಿನಿಯಾಗಿದ್ದಳು. ಎರಡು ತಿಂಗಳ ಹಿಂದೆ ನಡೆದ ಕಾರು ಅಪಘಾತದಲ್ಲಿ ಸ್ನೇಹಾ ಗಂಭೀರವಾಗಿ ಗಾಯಗೊಂಡಿದ್ದಳು. ಆಕೆಯನ್ನು ತಿರುವನಂತಪುರಂನ ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಳೆದ ಎರಡು ತಿಂಗಳಿಂದ ಸ್ನೇಹಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕಳೆದ ಶನಿವಾರ ಸ್ನೇಹಾ ಕೊನೆಯುಸಿರೆಳೆದಳು. ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಇತ್ತ ಗಾಯತ್ರಿ ನೆಲ್ಲಿಕುಝಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಗಾಯತ್ರಿ ಪತಿ ಹನುಮಂತ್ ನಾಯಕ್ ಮಹಾರಾಷ್ಟ್ರದ ಸಾಂಗ್ಲಿ ನಿವಾಸಿ. ಕಳೆದ 30 ವರ್ಷಗಳಿಂದ ಕೊತ್ತಮಂಗಲಂ ಜ್ಯುವೆಲ್ಲರಿಯಲ್ಲಿ ಉದ್ಯೋಗಿಯಾಗಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ತಾಯಿ-ಮಗಳ ಶವಗಳನ್ನು ಮಹಾರಾಷ್ಟ್ರಕ್ಕೆ ಕೊಂಡೊಯ್ದು ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.(ಏಜೆನ್ಸೀಸ್​)
ಅರ್ಜುನ್​ ಸರ್ಜಾರ ಕಿರಿಯ ಪುತ್ರಿಯನ್ನು ನೋಡಿದ್ದೀರಾ? ಸಿಕ್ಕಾಪಟ್ಟೆ ಬೋಲ್ಡ್​ ಅಂಜನಾ ಸರ್ಜಾ!

ಟ್ರಾವಿಸ್​​​ ಹೆಡ್​ ವಿನೂತನ ಶತಕ ಆಚರಣೆಯ ಹಿಂದಿರುವ ಅರ್ಥ ಗೊತ್ತಾ? ಆರ್​ಸಿಬಿ ವಿರುದ್ಧದ ಸೇಡಿಗಿದೆ ಲಿಂಕ್​!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:1 × one =
Remember me
