ಕಾನ್ಪುರ:ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ ದಿನದ ಬೆನ್ನಲ್ಲೇ ಸಂತ್ರಸ್ತೆಯ ತಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಎರಡು ದಿನಗಳ ಹಿಂದಷ್ಟೇ 13 ವರ್ಷದ ಬಾಲಕಿಯ ಮೇಲೆ ಗ್ಯಾಂಗ್​ರೇಪ್​ ನಡೆದಿತ್ತು. ಸಂತ್ರಸ್ತೆಯನ್ನು ಅದೇ ಗ್ರಾಮದ ಮೂವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ಸಂತ್ರಸ್ತ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಇಂದು ಬೆಳಗ್ಗೆ ಆಸ್ಪತ್ರೆ ಹೊರಭಾಗದಲ್ಲಿ ಅಪಘಾತ ನಡೆದಿದೆ.
ಗ್ಯಾಂಗ್​ರೇಪ್​ನ ಪ್ರಕರಣದ ಪ್ರಮುಖ ಆರೋಪಿ ಗೊಲು ಯಾದವ್ ತಂದೆ ಕಾನ್ಪುರದಿಂದ 100 ಕಿ.ಮೀ ದೂರದಲ್ಲಿರುವ ಕನೌಜ್​ ಜಿಲ್ಲೆಯಲ್ಲಿ ಸಬ್​ ಇನ್ಸ್​ಪೆಕ್ಟರ್​ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದನ್ನೂ ಓದಿರಿ:VIDEO: ನನ್ನನ್ನು ಕೊಂದುಬಿಡಿ… ಪ್ಲೀಸ್​ ಮಕ್ಕಳನ್ನು ಬಿಟ್ಟುಬಿಡಿ- ಮಂಡಿಯೂರಿ ಕುಳಿತ ಸಿಸ್ಟರ್​!
ಈಗಾಗಲೇ ಆರೋಪಿ ಗೋಲು ಯಾದವ್​ನನ್ನು ಬಂಧಿಸಲಾಗಿದೆ. ಗ್ಯಾಂಗ್​ರೇಪ್​ ವಿರುದ್ಧ ಬಾಲಕಿ ಕುಟುಂಬ ದೂರು ನೀಡಿದಾಗಿನಿಂದ ಸಂತ್ರಸ್ತ ಕುಟುಂಬಕ್ಕೆ ಗೊಲು ಯಾದವ್ ಕುಟುಂಬ ಬೆದರಿಕೆ ಹಾಕುತ್ತಿರುವ ಆರೋಪ ಕೇಳಿಬಂದಿದೆ. ​
ಇದೀಗ ಸಂತ್ರಸ್ತೆಯ ತಂದೆ ಮೃತಪಟ್ಟಿರುವುದು ಅನೇಕ ಅನುಮಾಗಳಿಗೆ ಎಡೆ ಮಾಡಿಕೊಟ್ಟಿದ್ದು, ಇದು ಅಪಘಾತವಲ್ಲ ಕೊಲೆ ಎಂದು ಮೃತನ ತಂದೆ ಹಾಗೂ ಸಂತ್ರಸ್ತೆಯ ತಾತ ಆರೋಪಿಸಿದ್ದಾರೆ.
ಸಂತ್ರಸ್ತೆಗೆ ವೈದ್ಯಕೀಯ ಚಿಕಿತ್ಸೆ ನಡೆಯುವಾಗ ತಂದೆ ಟೀ ತರಲೆಂದು ಹೊರಗಡೆ ಬಂದಾಗ ಅಪಘಾತ ಸಂಭವಿಸಿದೆ. ತಕ್ಷಣ ಕಾನ್ಪುರ ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿರುವುದಾಗಿ ಕಾನ್ಪುರ ಪೊಲೀಸ್​ ಮುಖ್ಯಸ್ಥ ಡಾ. ಪ್ರೀತಿಂದರ್​ ಸಿಂಗ್​ ಹೇಳಿದರು.(ಏಜೆನ್ಸೀಸ್​)
ಸಮುದ್ರದಲ್ಲಿ ತೇಲಿ ಬಂತು ಫುಲ್​ ಬಾಟಲ್​- ವಿದೇಶಿ ಮದ್ಯ ಎಂದು ಕುಡಿದ ಮೀನುಗಾರರು- ಮುಂದಾದದ್ದು ದುರಂತ!

ಹರಿಯಾಣ : ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮತ ಮಂಡನೆ

ಕೆಂಪು ಕೋಟೆ ಹಿಂಸಾಚಾರ : ಪರಾರಿ ಆಗುತ್ತಿದ್ದ ಡಚ್​ ಪ್ರಜೆ ಪೊಲೀಸರ ವಶಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 19 =
Remember me
