ಚೆನ್ನೈ:ನೀಟ್​ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಾದ ಮರುದಿನವೇ ಆತನ ತಂದೆ ಶವವಾಗಿ ಪತ್ತೆಯಾಗಿದ್ದಾನೆ. ತಮಿಳುನಾಡಿನ ಚೆನ್ನೈನಲ್ಲಿ ಈ ಪ್ರಕರಣ ನಡೆದಿದೆ.
ಜಗದೀಶ್ವರನ್​ (19) ಆತ್ಮಹತ್ಯೆ ಮಾಡಿಕೊಂಡ ಯುವಕ. 2022ರಲ್ಲಿ ಪಿಯುಸಿಯಲ್ಲಿ 427 ಅಂಕಗಳೊಂದಿಗೆ ಉತ್ತೀರ್ಣನಾಗಿದ್ದ ಈತ ಎರಡು ಸಲ ಪ್ರಯತ್ನಿಸಿದ್ದರೂ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪಾಸ್ ಆಗಲು ಆಗಿರಲಿಲ್ಲ. ಇದರಿಂದ ನೊಂದ ಈತ ಶನಿವಾರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.
ಪುತ್ರಶೋಕದಲ್ಲಿದ್ದ ತಂದೆ ಸೆಲ್ವಶೇಖರ್, ಆ ನೋವಿನಿಂದ ಹೊರಬರಲಾಗದೆ ನೊಂದು ಮರುದಿನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ಸೂಚಿಸಿದ್ದು, ಯುವಪೀಳಿಗೆ ಆತ್ಮಹತ್ಯೆಯ ಯೋಚನೆ ಮಾಡಬಾರದು, ಆತ್ಮವಿಶ್ವಾಸದೊಂದಿಗೆ ಬದುಕಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ ತಾಯಿ ನನಗೆ ಕೊಡೆ: ಹೈಕೋರ್ಟ್​​ ತಡೆ ಸಿಗುತ್ತಿದ್ದಂತೆ ಉಪೇಂದ್ರ ಫಸ್ಟ್ ರಿಯಾಕ್ಷನ್​

‘ಕರಾಳ ಶನಿವಾರ: 37 ಜನರ ಸಾವು..’ ಎಂದು ಕಿವಿಮಾತು ಹೇಳಿದ ಅಲೋಕ್​ ಕುಮಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
