ಮುಂಬೈ:15 ವರ್ಷದ ಬಾಲಕನೊಬ್ಬ 23ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಇದನ್ನೂ ಓದಿ;ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ, ಅಗತ್ಯ ಕ್ರಮಕ್ಕೆ ಸೂಚನೆ
ವರ್ತಕ್ ನಗರ ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ವಾಸಿಸುತ್ತಿದ್ದ 10ನೇ ತರಗತಿ ಬಾಲಕನೊಬ್ಬ ಮಹಾರಾಷ್ಟ್ರ ಶಿಕ್ಷಣ ಮಂಡಳಿಯ ಎಸ್‌ಎಸ್‌ಸಿ (10ನೇ ತರಗತಿ) ಪರೀಕ್ಷೆಯಲ್ಲಿ ಶೇಕಡಾ 92 ಅಂಕಗಳನ್ನು ಗಳಿಸಿದ್ದ. ಕಳೆದ ವಾರ ಈ ಫಲಿತಾಂಶ ಪ್ರಕಟಿಸಲಾಗಿತ್ತು. ಗುರುವಾರ ರಾತ್ರಿ 2ರ ಸುಮಾರಿಗೆ ಕಟ್ಟಡದ ನಿವಾಸಿಗಳು ಏನೋ ಬಿದ್ದ ಹಾಗೆ ಶಬ್ದವೊಂದನ್ನು ಕೇಳಿದ್ದರು. ಗಾಬರಿಯಾಗಿ ಹೊರಬಂದು ನೋಡಿದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿದ್ದ ಕಂಡಿದ್ದಾರೆ.
ಕೂಡಲೇ ಪೊಲೀಸರಿಗೆ ಈ ಸುದ್ದಿಯನ್ನು ತಿಳಿಸಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕನ ಸಾವಿನ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬಾಲಕನ ಗುರುತನ್ನು ಗುಪ್ತವಾಗಿ ಇಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + four =
Remember me
