ಬೆಂಗಳೂರು:ರಷ್ಯಾ-ಯೂಕ್ರೇನ್​ ಯುದ್ಧದಲ್ಲಿ ಸಾವಿಗೀಡಾದ ನವೀನ್ ಶೇಖರಪ್ಪ ಗ್ಯಾನಗೌಡರ್ ಅವರ ಪಾರ್ಥಿವ ಶರೀರ, ಅವರು ಮೃತಪಟ್ಟ 20 ದಿನಗಳ ಬಳಿಕ ಮನೆಗೆ ಬರಲಿದೆ. ಪಾರ್ಥಿವ ಶರೀರವನ್ನು ಭಾರತಕ್ಕೆ ತರಲಿರುವ ಕುರಿತು ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ನೀಡಿದ್ದಾರೆ.
ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ರಷ್ಯಾ ದಾಳಿ ಸಂದರ್ಭ ಯೂಕ್ರೇನ್​ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ಮಾ. 21ರ ಬೆಳಗಿನ ಜಾವ ಮೂರು ಗಂಟೆಗೆ ಬೆಂಗಳೂರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
21 ವರ್ಷದ ನವೀನ್ ಯೂಕ್ರೇನ್​ನಲ್ಲಿ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದರು. ಮಾ. 1ರಂದು ಯೂಕ್ರೇನ್​ನ ಖಾರ್ಕಿವ್​ನಲ್ಲಿ ರಷ್ಯಾದ ಕ್ಷಿಪಣಿ ದಾಳಿಗೆ ತುತ್ತಾಗಿ ನವೀನ್​ ಮೃತಪಟ್ಟಿದ್ದರು. ನಾನಾ ಕಾರಣಗಳಿಂದಾಗಿ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಆಗಿರಲಿಲ್ಲ.
ರಾಜ್ಯದಲ್ಲಿ ಮತ್ತೆ ಕೇಸರಿ ಹವಾ!; ಈಗ ಶಾಲು ತೊಡಲು ಕಾರಣ ಅದಲ್ಲ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
