ಲಖನೌ:ಹುಟ್ಟಿನಿಂದಲೇ ಮಾತನಾಡುವ ಹಾಗೂ ಕೇಳಿಸಿಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದ್ದ ಬಾಲಕಿಯೊಬ್ಬಳ ಮೇಲೆ ಊರ ಯುವಕನೇ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಭೂತಾ ಪ್ರದೇಶದ ಗ್ರಾಮವೊಂದರಲ್ಲಿ ಇಂತಹ ಘೋರ ಕೃತ್ಯ ನಡೆದಿದೆ. ಸೋಮವಾರ ಸಂಜೆ ವೇಳೆ 16 ವರ್ಷದ ಮೂಗಿ-ಕಿವುಡಿ ಬಾಲಕಿ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಳು. ಆ ವೇಳೆಗೆ ಅಲ್ಲಿಗೆ ಬಂದ ಯುವಕ ಆಕೆಯನ್ನು ಎಳೆದುಕೊಂಡು ಹೋಗಿದ್ದಾನೆ. ಯಾರೂ ಇರದ ತನ್ನ ಮನೆಯಲ್ಲಿ ಆಕೆಯನ್ನು ಕೂಡಿ ಹಾಕಿಕೊಂಡು ಅತ್ಯಾಚಾರವೆಸಗಿದ್ದಾನೆ.
ಈ ವಿಚಾರದಲ್ಲಿ ಬಾಲಕಿಯ ತಂದೆ ಮತ್ತು ಕೆಲ ಗ್ರಾಮಸ್ಥರು ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ. ಗ್ರಾಮಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ಠಾಣೆಗೆ ಎಳೆದೊಯ್ದಿದ್ದಾರೆ. ಆ ಹೊತ್ತಿಗಾಗಲೇ ಆರೋಪಿ ಊರು ಬಿಟ್ಟು ಓಡಿಹೋಗುವ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ. ಬಾಲಕಿಯನ್ನು ಕೌನ್ಸೆಲಿಂಗ್​ಗೆ ಒಳಪಡಿಸಿರುವುದಾಗಿ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)
ಮದುವೆಯಾಗಿ ಒಂದೂವರೆ ತಿಂಗಳಲ್ಲಿ ಯೂಟ್ಯೂಬರ್​ ಪತ್ನಿ ಆತ್ಮಹತ್ಯೆ! ಹಿಂಸೆ ಕೊಟ್ಟ ಗಂಡ ಪೊಲೀಸರ ಅತಿಥಿಯಾದ

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

‘ಅಪ್ಪಾ, ನನ್ನ ಕ್ಷಮಿಸಿ’ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನವ ವಿವಾಹಿತ ವೈದ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − two =
Remember me
